ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಖಾಸಗೀಕರಣ: ಕಾಂಗ್ರೆಸ್ ಪ್ರತಿಭಟನೆ

Last Updated 9 ನವೆಂಬರ್ 2020, 7:41 IST
ಅಕ್ಷರ ಗಾತ್ರ

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಖಾಸಗೀಕರಣವನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನಗರದ ಬಜ್ಪೆಯ ಕೆಂಜಾರ್ ಬಳಿ ಸೋಮವಾರ ಪ್ರತಿಭಟನೆ ನಡೆಯಿತು.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (ಎಎಐ) ಅಧೀನದಲ್ಲಿದ್ದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರವು ಖಾಸಗೀಕರಣಗೊಳಿಸಿ ಅದಾನಿ ಗ್ರೂಪ್‌ಗೆ ನೀಡಿರುವುದನ್ನು ಖಂಡಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ ಹರೀಶ್ ಕುಮಾರ್, ಮಾಜಿ ಸಚಿವ ಅಭಯ ಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್. ಲೋಬೊ, ಮೊಹಿಯುದ್ದೀನ್ ಬಾವಾ, ಐವನ್ ಡಿಸೋಜ, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮಿಥುನ್ ರೈ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT