ಮಂಗಳೂರು: ಸೋಮವಾರ ಬಂಗ್ರಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಬೃಹತ್ ಜನಜಾಗೃತಿ ಸಮಾವೇಶಕ್ಕೆ ಆಹ್ವಾನಿಸಲು ಶಾಸಕ ಡಿ.ವೇದವ್ಯಾಸ ಕಾಮತ್ ಅವರು ನಗರದ ಕುದ್ರೋಳಿ ಹಾಗೂ ಕೊಡಿಯಾಲ್‌ಬೈಲ್ ವಾರ್ಡ್‌ನ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳು ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಮರೆತು, ಸಾರ್ವಜನಿಕರೊಳಗೆ ಗೊಂದಲ ಮೂಡಿಸುತ್ತಿವೆ. ಪೌರತ್ವ ತಿದ್ದುಪಡಿ ಕಾಯ್ದೆಯ ವಿಚಾರ ಅರಿಯದೇ, ಜನರ ಮನಸ್ಸಿನೊಳಗೆ ಭೇದ ಭಾವ ಮೂಡಿಸುತ್ತಿರುವ ವಿರೋಧ ಪಕ್ಷಗಳ ನಡೆ ಖಂಡನೀಯ ಎಂದರು.

ಸಾರ್ವಜನಿಕ ವಲಯಗಳಲ್ಲಿ ಕಾಯ್ದೆಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಅವರು ಜನ ಜಾಗೃತಿ ಸಭೆಯಲ್ಲಿ ಮಾಹಿತಿ ನೀಡಲಿದ್ದಾರೆ. ನಗರದ ಪ್ರತಿಯೊಬ್ಬರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಕೊಡಿಯಾಲ್‌ಬೈಲ್ ವಾರ್ಡ್‌ನಿಂದ ಸುಮಾರು 700 ಜನ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಕಾರ್ಯಕರ್ತರು ಈಗಾಗಲೇ ಮನೆ ಮನೆ ಭೇಟಿ ಮಾಡಿ ಸಮಾವೇಶಕ್ಕೆ ಆಹ್ವಾನಿಸುತ್ತಿದ್ದಾರೆ ಎಂದು ಹೇಳಿದರು.

ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಸಾರ್ವಜನಿಕರು ಅರಿಯಬೇಕು. ಮುಂದಿನ ದಿನಗಳಲ್ಲಿ ಜನರ ಮನಸ್ಸಿನಲ್ಲಿ ಗೊಂದಲ ಸೃಷ್ಟಿಸುವವರಿಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಲೀಲಾವತಿ ಪ್ರಕಾಶ್ ಸಾಲ್ಯಾನ್, ಬಿಜೆಪಿ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.