ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊ.ಪಿ.ಎಲ್.ಧರ್ಮ ನೇಮಕವಾಗಿದ್ದು, ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಕೊಡಗಿನವರಾದ ಪ್ರೊ.ಪಿ.ಎಲ್ ಧರ್ಮ ವಿಶ್ವವಿದ್ಯಾನಿಲಯದ 10ನೇ ಕುಲಪತಿಯಾಗಿದ್ದಾರೆ. ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ ಹಾಗೂ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕರಾಗಿ, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕರಾಗಿ ಹಾಗೂ ವಿವಿಧ ಸಮಿತಿ, ಆಡಳಿತ ವಿಭಾಗಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಅವರು ಪರೀಕ್ಷಾಂಗ ವಿಭಾಗದ ಕುಲಸಚಿವರಾಗಿಯೂ ಜವಾಬ್ಧಾರಿ ನಿರ್ವಹಿಸಿದ್ದರು.

ಅಧಿಕಾರ ಸ್ವೀಕರಿಸಿದ ದಿನದಿಂದ ನಾಲ್ಕು ವರ್ಷಗಳವರೆಗೆ ಅಥವಾ ಅವರಿಗೆ 67 ವರ್ಷ ಭರ್ತಿಯಾಗುವವರೆಗೆ, ಇವೆರಡಲ್ಲಿ ಯಾವುದು ಮೊದಲೋ ಆ ದಿನಾಂಕದವರೆಗೆ ಅವರು ಕುಲಪತಿಯಾಗಿ ಮುಂದುವರಿಯಲಿದ್ದಾರೆ.

ಈ ಹಿಂದಿನ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರ ಅವಧಿ 2023ರ ಜೂನ್ 2ಕ್ಕೆ ಕೊನೆಗೊಂಡಿತ್ತು. ಆ ಬಳಿಕ ವಿಶ್ವವಿದ್ಯಾಲಯದ ಅತ್ಯಂತ ಹಿರಿಯ ಡೀನ್ ಆಗಿದ್ದ ಪ್ರೊ.ಜಯರಾಜ್ ಅಮೀನ್ ಅವರನ್ನು ಹಂಗಾಮಿ ಕುಲಪತಿಯನ್ನಾಗಿ ನೇಮಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.