ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತೆರಿಗೆ ಇಳಿಕೆಗೆ ಸರ್ಕಾರಕ್ಕೆ ಪ್ರಸ್ತಾವ: ಮೇಯರ್

Published : 6 ಸೆಪ್ಟೆಂಬರ್ 2024, 16:37 IST
Last Updated : 6 ಸೆಪ್ಟೆಂಬರ್ 2024, 16:37 IST
ಫಾಲೋ ಮಾಡಿ
Comments

ಮಂಗಳೂರು: ಕಳೆದ ಅಕ್ಟೋಬರ್‌ನಲ್ಲಿ ನಿವೇಶನದ ಗೈಡ್‌ಲೈನ್ ಮೌಲ್ಯ ಹೆಚ್ಚಳ ಮಾಡಿರುವ ಪರಿಣಾಮ ಪಾಲಿಕೆ ವ್ಯಾಪ್ತಿಯ ಖಾಲಿ ಜಾಗಗಳ ಮೇಲಿನ ತೆರಿಗೆ ಹೆಚ್ಚಳವಾಗಿದ್ದು, ಇದನ್ನು ಕಡಿಮೆ ಮಾಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಹಿಂದೆ ಖಾಲಿ ಜಾಗಕ್ಕೆ ಶೇ 0.20ರಷ್ಟಿದ್ದ ತೆರಿಗೆಯನ್ನು ಶೇ 0.50ಕ್ಕೆ ಏರಿಕೆ ಮಾಡಲಾಗಿದೆ. ಪ್ರತಿಪಕ್ಷದ ಸದಸ್ಯರ ಜೊತೆ ಸಭೆ ನಡೆಸಿ, ಇದನ್ನು ಶೇ 0.10ಕ್ಕೆ ಇಳಿಕೆಗೆ ನಿರ್ಧರಿಸಲಾಗಿದ್ದು, ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಪ್ರತಿಪಕ್ಷದ ಸದಸ್ಯರು ನಗರಾಭಿವೃದ್ಧಿ ಸಚಿವರು, ಇಲಾಖೆ ಕಾರ್ಯದರ್ಶಿಗೆ ಮನವರಿಕೆ ಮಾಡಿಕೊಡಬೇಕು’ ಎಂದರು.

ಸ್ವಯಂ ಘೋಷಿತ ಆಸ್ತಿ ತೆರಿಗೆ ಬಂದನಂತರ ಪ್ರತಿವರ್ಷ ಶೇ5ರಷ್ಟು ತೆರಿಗೆ ಹೆಚ್ಚಳಕ್ಕೆ ಕಾನೂನು ರೂಪಿತವಾಗಿದೆ. ಕಳೆದ ಮೂರು ವರ್ಷಗಳಲ್ಲೂ ಹೆಚ್ಚಾಗಿದ್ದು, ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಕೂಡ ಹೆಚ್ಚಳ ಆಗಿತ್ತು. ಒಂದು ವರ್ಷದಿಂದ ರಾಜ್ಯ ಸರ್ಕಾರದಿಂದ ಪಾಲಿಕೆಗೆ ಅನುದಾನ ಬಂದಿಲ್ಲ. ನಗರಾಭಿವೃದ್ಧಿ ಸಚಿವರು ಅನುದಾನ ನೀಡುವುದಾಗಿ ಭರವಸೆ ನೀಡಿದ್ದರೂ, ಈತನಕ ಯಾವುದೇ ನೆರವು ದೊರೆತಿಲ್ಲ. ವರ್ಗಾವಣೆ ಮಾತ್ರ ದಂಧೆ ರೂಪದಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದರು.

ಉಪಮೇಯರ್ ಸುನೀತಾ, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ವರುಣ್‌ ಚೌಟ, ಲೋಹಿತ್‌, ಗಣೇಶ್‌ ಕುಮಾರ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT