ಶನಿವಾರ, ಸೆಪ್ಟೆಂಬರ್ 18, 2021
30 °C

ಸುಬ್ರಹ್ಮಣ್ಯ: ಮದ್ಯದಂಗಡಿ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುಬ್ರಹ್ಮಣ್ಯ: ಸುಳ್ಯ ತಾಲ್ಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದಂಗಡಿ ಆರಂಭಿಸಬಾರದು ಎಂದು ಒತ್ತಾಯಿಸಿ ಮಂಗಳವಾರ ಹರಿಹರ ಪೇಟೆಯಲ್ಲಿ ನಡೆಯಿತು.

ಮದ್ಯ ಮುಕ್ತ ಗ್ರಾಮ ಹೋರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಒಟ್ಟಾಗಿ ಪೇಟೆಯಿಂದ ಗ್ರಾಮ ಪಂಚಾಯಿತಿವರೆಗೆ ಜಾಥ ನಡೆಸಿದರು. ಬಳಿಕ ಮಂಗಳೂರು ಅಬಕಾರಿ ಆಯುಕ್ತರಿಗೆ ಗ್ರಾಮ ಪಂಚಾಯಿತಿ ಮೂಲಕ ಮನವಿ ಸಲ್ಲಿಸಿದರು.

ಸಾರ್ವಜನಿಕ ವಿರೋಧದ ಕಾರಣಕ್ಕೆ ಹರಿಹರ ಪಲ್ಲತ್ತಡ್ಕದಲ್ಲಿ 1994ರಿಂದಲೇ ಮದ್ಯದಂಗಡಿ ಇಲ್ಲ. ಈಗ ಬೇರೆಡೆಯಿಂದ ಬಾರ್ ಆ್ಯಂಡ್ ರೆಸ್ಟೋರೆಂಟ್ ಅನ್ನು ಹರಿಹರ ಪಲ್ಲತ್ತಡ್ಕಕ್ಕೆ ಸ್ಥಳಾಂತರಿಸಲು ಪ್ರಯತ್ನ ನಡೆಯುತ್ತಿದೆ. ಸುಳ್ಯ ಅಬಕಾರಿ ಇಲಾಖೆಯವರು ಇಲ್ಲಿಗೆ ಬಂದು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಹಜರು ಮಾಡಿದ್ದಾರೆ. ಗ್ರಾಮದ ಹಾಗೂ ಸುತ್ತಲಿನ 5 ಗ್ರಾಮಗಳ ಜನರು ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮದ್ಯ ಮುಕ್ತ ಗ್ರಾಮ ಸಮಿತಿ ಗೌರವಾಧ್ಯಕ್ಷ ದುರ್ಗಾದಾಸ್ ಮಲ್ಲಾರ, ಅಧ್ಯಕ್ಷ ಹಿಮ್ಮತ್ ಕಿರಿಭಾಗ, ಜನ ಜಾಗೃತಿ ವೇದಿಕೆ ಸುಳ್ಯದ ಮಾದವ ಚಾಂತಾಳ, ಸತೀಶ್ ಕೆರೆಕ್ಕೋಡಿ, ವಿನುಪ್ ಮಲ್ಲಾರ, ನವ ಜೀವನ ಸಮಿತಿ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಸದಸ್ಯರು, ಗ್ರಾಮಸ್ಥರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು