ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡುಬಿದಿರೆ: ಬಾಕಿ ತುಟ್ಟಿಭತ್ಯೆ ನೀಡಲು ಆಗ್ರಹಿಸಿ ಬೀಡಿ ಕೆಲಸಗಾರರ ಪ್ರತಿಭಟನೆ

Published 2 ಆಗಸ್ಟ್ 2023, 6:09 IST
Last Updated 2 ಆಗಸ್ಟ್ 2023, 6:09 IST
ಅಕ್ಷರ ಗಾತ್ರ

ಮೂಡುಬಿದಿರೆ: ಬೀಡಿ ಕಾರ್ಮಿಕರಿಗೆ 2015ರಿಂದ 2018ರವರೆಗೆ ಬಾಕಿ ಇರುವ ತುಟ್ಟಿ ಭತ್ಯೆ ಮೊತ್ತವನ್ನು ನೀಡುವಂತೆ ಒತ್ತಾಯಿಸಿ ಮತ್ತು 2018ರಿಂದ ಬೀಡಿ ಕಾರ್ಮಿಕರಿಗೆ ನೀಡಬೇಕಾದ ಕನಿಷ್ಠ ಕೂಲಿ ಪಾವತಿಗೆ ಆಗ್ರಹಿಸಿ ಮೂಡುಬಿದಿರೆ ಪ್ರದೇಶ ಬೀಡಿ ಕೆಲಸಗಾರರ ಸಂಘದಿಂದ ಸೌತ್ ಕೆನರಾ ಹೋಂ ಇಂಡಸ್ಟ್ರೀಸ್, ಮೂಡುಬಿದಿರೆ ಡಿಪೋ ಬಳಿ ಮಂಗಳವಾರ ಪ್ರತಿಭಟನೆ ನಡೆಯಿತು.

ಬೀಡಿ ಫೆಡರೇಷನ್‌ನ ಜಿಲ್ಲಾ ಘಟಕದ ಅಧ್ಯಕ್ಷ ವಸಂತ ಆಚಾರಿ ಮಾತನಾಡಿ, ತುಟ್ಟಿ ಭತ್ಯೆ ನೀಡುವಂತೆ ಕೋರ್ಟ್‌ ಆದೇಶಿಸಿದ್ದರೂ ಮಾಲೀಕರು ಕೋರ್ಟ್‌ ಆದೇಶವನ್ನು ಪಾಲಿಸುತ್ತಿಲ್ಲ. ಬಾಕಿ ತುಟ್ಟಿ ಭತ್ಯೆಯನ್ನು ನೀಡುವವರೆಗೆ ನಮ್ಮ ಹೋರಾಟ ನಿಲ್ಲದು ಎಂದರು.

ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಯಾದವ ಶೆಟ್ಟಿ ಮಾತನಾಡಿ, ಬೀಡಿ ಮಾಲೀಕರು ತುಟ್ಟಿ ಭತ್ಯೆಯನ್ನು ತಡೆಹಿಡಿದಿರುವುದು ಕಾನೂನುಬಾಹಿರ. ಕಾರ್ಮಿಕರ ಸಂಕಷ್ಟ ಅರಿತು ಕೂಡಲೇ ತುಟ್ಟಿ ಭತ್ಯೆ ಮಂಜೂರು ಮಾಡುವಂತೆ ಒತ್ತಾಯಿಸಿದರು.

ಮೂಡುಬಿದಿರೆ ಪ್ರದೇಶ ಬೀಡಿ ಕೆಲಸಗಾರರ ಸಂಘದ ಅಧ್ಯಕ್ಷೆ ರಮಣಿ ಅಧ್ಯಕ್ಷತೆ ವಹಿಸಿದ್ದರು. ಕೋಶಾಧಿಕಾರಿ ಗಿರಿಜಾ, ರೈತ ಸಂಘದ ಮೂಡುಬಿದಿರೆ ಅಧ್ಯಕ್ಷ ಸುಂದರ ಶೆಟ್ಟಿ, ಸಿಐಟಿಯುನ ಮೂಡುಬಿದಿರೆ ಅಧ್ಯಕ್ಷ ಶಂಕರ್, ಪದಾಧಿಕಾರಿಗಳಾದ ಕೃಷ್ಣಪ್ಪ, ಜಲಜ, ಕಲ್ಯಾಣಿ, ರಾಧ, ಬೇಬಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT