ಬೆಳ್ತಂಗಡಿ: ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಬೇಕು. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ನಡೆಸಬೇಕು ಎಂದು ಒತ್ತಾಯಿಸಿ ಸಿಪಿಎಂ ಮುಖಂಡ ಶೇಖರ ಲಾಯಿಲ ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆಗೆ ಸೋಮವಾರ ಚಾಲನೆ ನೀಡಿದರು.
ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಧರಣಿ ನಡೆಸಿದ ಅವರು, ಮಾಧ್ಯಮದವರೊಂದಿಗೆ ಮಾತನಾಡಿ, ‘ತಾಲ್ಲೂಕಿನಲ್ಲಿ ಕೇವಲ 5 ಮಂದಿಗೆ ನದಿಯಿಂದ ಮರಳು ತೆಗೆಯಲು ಅಧಿಕೃತ ಪರವಾನಗಿ ನೀಡಲಾಗಿದೆ. ಆದರೆ, ತಾಲ್ಲೂಕಿನ ಎಲ್ಲ ನದಿಗಳಲ್ಲಿ, ತೊರೆಗಳಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆ ಯುತ್ತಿದೆ. ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಎಷ್ಟು ಮನವಿ ಸಲ್ಲಿಸಿದರೂ ಯಾವುದೇ ಅಧಿಕಾರಿ ಸ್ಪಂದಿಸುತ್ತಿಲ್ಲ. ಅದರಿಂದಾಗಿ ಪ್ರತಿಭಟನೆ ಆರಂಭಿಸಿದ್ದೇನೆ. ಭರವಸೆ ಸಿಗುವವರೆಗೆ ಪ್ರತಿಭಟನೆ ನಡೆಸುತ್ತೇನೆ’ ಎಂದರು.
ಪ್ರತಿ ದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ಮುಂದುವರಿ ಸಲಾಗುವುದು ಎಂದು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.