ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸುರತ್ಕಲ್ | ಉಪರಾಷ್ಟ್ರಪತಿಯ ಅವಹೇಳನ: ಪ್ರತಿಭಟನೆ

Published 21 ಡಿಸೆಂಬರ್ 2023, 14:58 IST
Last Updated 21 ಡಿಸೆಂಬರ್ 2023, 14:58 IST
ಅಕ್ಷರ ಗಾತ್ರ

ಸುರತ್ಕಲ್: ಉಪರಾಷ್ಟ್ರಪತಿಯನ್ನು ಅಣಕಿಸಿ, ಅವಹೇಳನ ಮಾಡಿರುವುದು ದೇಶಕ್ಕೆ ಮಾಡಿದ ಅವಮಾನ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನಗರ ಉತ್ತರ ಮಂಡಲ ಸುರತ್ಕಲ್ ಜಂಕ್ಷನ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಸಿಗದೆ ಇದ್ದಾಗ ಈ ರೀತಿ ಅವಮಾನ ಮಾಡಿ ಸೇಡು ತೀರಿಸಿಕೊಳ್ಳುವ ಪ್ರಯತ್ನ ಮಾಡುತ್ತದೆ. ಇದನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್‌ ವಿರೋಧ ಪಕ್ಷದಲ್ಲೇ ಕುಳಿತುಕೊಳ್ಳಿಸಲಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಕಾಂಗ್ರೆಸ್ 10 ವರ್ಷಗಳಲ್ಲಿ ಅಧಿಕಾರ ಸಿಗದೆ ಚಡಪಡಿಸುತ್ತಿದೆ. ಉತ್ತರದ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಹೀನಾಯ ಸೋಲನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಅವಹೇಳನ ಮಾಡಿ ದೇಶದ ಜನತೆಯ ಆಕ್ರೋಶಕ್ಕೆ ಕಾಂಗ್ರೆಸ್ ತುತ್ತಾಗಿದೆ ಎಂದರು.

ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿದರು.

ಬಿಜೆಪಿ ಪ್ರಮುಖರಾದ ಜಗದೀಶ್ ಶೇಣವ, ಕಸ್ತೂರಿ ಪಂಜ, ಪೂಜಾ ಪೈ, ತಿಲಕ್‍ರಾಜ್ ಕೃಷ್ಣಾಪುರ, ಉಪಮೇಯರ್ ಸುನಿತಾ, ವಿಠಲ ಸಾಲಿಯಾನ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT