ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರ: ಮದ್ಯದಂಗಡಿ ಮುಚ್ಚಲು ಆಗ್ರಹ

ಸ್ಥಳೀಯರಿಂದ ಪ್ರತಿಭಟನೆ: ಅಬಕಾರಿ ಅಧಿಕಾರಿಗಳಿಗೆ ಮನವಿ
Last Updated 23 ಜೂನ್ 2022, 2:26 IST
ಅಕ್ಷರ ಗಾತ್ರ

ಪುತ್ತೂರು: ತಾಲ್ಲೂಕಿನ ಕಬಕ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಮುರ -ಕೆದಿಲ ರಸ್ತೆಯ ಮುರದಲ್ಲಿ ತೆರೆಯಲಾದ ಮದ್ಯ ಮಾರಾಟ ಅಂಗಡಿ(ಬಾರ್ ಅ್ಯಂಡ್ ರೆಸ್ಟೋರೆಂಟ್) ಮುಚ್ಚುವಂತೆ ಆಗ್ರಹಿಸಿ ಸ್ಥಳೀಯರು ಸೋಮವಾರ ಪ್ರತಿಭಟನೆ ನಡೆಸಿದರು.

ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಸ್ಥಳಕ್ಕೆ ಬಂದ ಅಬಕಾರಿ ಇಲಾಖೆಯ ಅಧಿಕಾರಿಗಳ ವಾಹನಕ್ಕೆ ಸುದರ್ಶನ್ ಹಾಗೂ ಸಾರ್ವಜನಿಕರು ದಿಗ್ಬಂಧನ ಹಾಕಿದರು.

ಗ್ರಾಮ ಪಂಚಾಯಿತಿಗೆ ಆಕ್ಷೇಪಣಾ ಮನವಿ ಸಲ್ಲಿಸಿದ್ದೇವೆ ಎಂದು ಪ್ರತಿಭಟನಕಾರರು ಅಬಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

‘ಮೇಲಧಿಕಾರಿಗಳ ಸೂಚನೆಯಂತೆ ನಾವು ಪರಿಶೀಲನೆಗೆ ಬಂದಿದ್ದೇವೆ. ನಿಮ್ಮ ಅಭಿಪ್ರಾಯವನ್ನು ಮೇಲಧಿಕಾರಿಗಳ ಗಮನಕ್ಕೆ ತರುತ್ತೇವೆ’ ಎಂದು ಅಬಕಾರಿ ನಿರೀಕ್ಷಕಿ ಸುಜಾತಾ ತಿಳಿಸಿದರು.

ಮದ್ಯದಂಗಡಿ ಮುಚ್ಚಬೇಕು. ಇಲ್ಲದಿದ್ದರೆ ನಾವು ಇಲ್ಲಿಂದ ಕದಲುವುದಿಲ್ಲ ಎಂದು ಸ್ಥಳೀಯರು ಘೋಷಣೆ ಕೂಗಿದರು. ಪೊಲೀಸರು ಜಮಾಯಿಸಿದ್ದ ಮಂದಿಯನ್ನು ತೆರವುಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT