ಶುಕ್ರವಾರ, ಮಾರ್ಚ್ 24, 2023
31 °C
ಯುವ ವಕೀಲನ ಮೇಲೆ ದೌರ್ಜನ್ಯ ಆರೋಪ

ಯುವ ವಕೀಲರೊಬ್ಬರನ್ನು ರಾತ್ರೋ ರಾತ್ರಿ ಬಂಧಿಸಿ ಹಲ್ಲೆ: ಪಿಎಸ್‌ಐ ಸುತೇಶ್ ಅಮಾನತು

ಪ್ರಜವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಯುವ ವಕೀಲರೊಬ್ಬರನ್ನು ರಾತ್ರೋ ರಾತ್ರಿ ಬಂಧಿಸಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಪಿಎಸ್‌ಐ ಸುತೇಶ್‌ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಪುಂಜಾಲಕಟ್ಟೆ ಠಾಣೆಯ ಪಿಎಸ್‌ಐ ಸುತೇಶ್‌ ಅವರು ಯುವ ವಕೀಲ ಕುಲ್‌ದೀಪ್‌ ಅವರನ್ನು ಕಳವು ಪ್ರಕರಣ ಸಂಬಂಧ ಇತ್ತೀಚೆಗೆ ಬಂದಿಸಿದ್ದರು. ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ‘ವ್ಯಕ್ತಿಯ ಬಂಧನ ನಡೆಸುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಅನುಸರಿಸಬೇಕಾದ ಕ್ರಮಗಳನ್ನು ಪಿಎಸ್‌ಐ ಸುತೇಶ್‌ ಉಲ್ಲಂಘಿಸಿದ್ದಾರೆ. ಇದೊಂದು ಪೊಲೀಸ್‌ ದೌರ್ಜನ್ಯ’ ಎಂದು ಆರೋಪಿಸಿ ವಕೀಲ ಸಮುದಾಯ ಮಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿತ್ತು. ಬಳಿಕ ಸುತೇಶ್‌ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಅವರನ್ನು ವಿಚಾರಣೆಗೆ ಒಳಪಡಿಸಲು ಡಿವೈಎಸ್‌ಪಿ ಅವರನ್ನು ನೇಮಿಸಲಾಗಿತ್ತು.

ಆ ಬಳಿಕವೂ ಸಮಾಧಾನಗೊಳ್ಳದ ಮಂಗಳೂರು ವಕೀಲರ ಸಂಘದ ಪ್ರಮುಖರು, ‘ಸುತೇಶ್‌ ವಿರುದ್ಧ ಕ್ರಮ ಕೈಗೊಳ್ಳಬೇಕು‘ ಎಂದು ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶನಿವಾರ ಮನವಿ ಸಲ್ಲಿಸಿದ್ದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು