ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡಿಮೆ ವೆಚ್ಚದಲ್ಲಿ ಗುಣಾತ್ಮಕ ಶಿಕ್ಷಣ

ನಾಲ್ಯಪದವು ಸರ್ಕಾರಿ ಪಿಯು ಕಾಲೇಜು ಆರಂಭದಲ್ಲಿ ಶಾಸಕ ವೇದವ್ಯಾಸ ಕಾಮತ್
Last Updated 19 ಸೆಪ್ಟೆಂಬರ್ 2021, 4:46 IST
ಅಕ್ಷರ ಗಾತ್ರ

ಮಂಗಳೂರು: ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಸರ್ಕಾರ ಕಡಿಮೆ ವೆಚ್ಚದಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಅಗತ್ಯ ಕ್ರಮಕೈಗೊಂಡಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ಶಕ್ತಿನಗರದ ನಾಲ್ಯಪದವು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಪ್ರಥಮ ವರ್ಷದ ತರಗತಿಗಳ ಆರಂಭ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಅವರು ಮಾತನಾಡಿದರು.

ಸರ್ಕಾರಿ ವ್ಯವಸ್ಥೆಯಲ್ಲಿ ಉತ್ತಮ ಶಿಕ್ಷಣ ನೀಡಲು ಶಕ್ತಿನಗರದ ಭಾಗದಲ್ಲಿ ಪದವಿ ಪೂರ್ವ ಕಾಲೇಜು ಆರಂಭಿಸಲಾಗಿದೆ. ಬಹಳಷ್ಟು ವರ್ಷಗಳಿಂದ ಬೇಡಿಕೆಯಿತ್ತು. ಅದಕ್ಕೆ ಸಹಕರಿಸಿದ ಹಿಂದಿನ ಶಿಕ್ಷಣ ಸಚಿವರಾದ ಎಸ್. ಸುರೇಶ್ ಕುಮಾರ್ ಅವರಿಗೆ ವಿಶೇಷ ಅಭಿನಂದನೆ ಸಲ್ಲಬೇಕು. ಕಾಲೇಜಿನಲ್ಲಿ ಕಲೆ ಹಾಗೂ ವಾಣಿಜ್ಯ ವಿಷಯಗಳನ್ನು ಬೋಧಿಸಲಾಗುತ್ತಿದೆ, ಮುಂದಿನ ವರ್ಷದಿಂದ ವಿಜ್ಞಾನ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಮಂಜೂರಾಗಿದ್ದ ₹ 21 ಕೋಟಿ ಮೊತ್ತದಲ್ಲಿ ₹ 5 ಕೋಟಿ ಮಂಗಳೂರಿಗೆ ಮಂಜೂರು ಮಾಡಿಸಿಕೊಳ್ಳಲಾಗಿದೆ. ಹಂಪನಕಟ್ಟೆ ಬಳಿಯ ಬೋಕಪಟ್ಣದಲ್ಲಿ ನಿರ್ಮಿಸಲಾಗುತ್ತಿರುವ ಪದವಿ ಪೂರ್ವ ಕಾಲೇಜಿಗೆ ₹ 4.82 ಕೋಟಿ ಬಿಡುಗಡೆ ಮಾಡಲಾಗಿದೆ. ನಾಲ್ಯಪದವು ಸರ್ಕಾರಿ ಕಾಲೇಜಿನ ಹೆಸರಿನಲ್ಲಿ 50 ಸೆಂಟ್ಸ್ ಭೂಮಿ ಲಭ್ಯವಾದಲ್ಲಿ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ₹ 4.82 ಕೋಟಿ ಅನುದಾನವನ್ನು ಮಂಜೂರು ಮಾಡಿಸಲಾಗುವುದು. ಸೆ. 28ರ ನಂತರ ಶಿಕ್ಷಣ ಸಚಿವರು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು, ಆಗ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆಯ ಸ್ಥಳೀಯ ಸದಸ್ಯರಾದ ವನಿತಾ ಪ್ರಸಾದ್, ಶಕೀಲಾ ಖಾವಾ, ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಯಣ್ಣ, ನಾಲ್ಯಪದವು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಯನಂದ ಸುವರ್ಣ, ಪ್ರೌಢಶಾಲೆಯ ಮುಖ್ಯಶಿಕ್ಷಕಿ ವಿಜಯ ಕುಮಾರಿ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಬಿ.ಎಸ್. ರಾವ್, ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯ ಪುರುಷೋತ್ತಮ ಭಟ್, ಪದವು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಕುಶಾಲ್ ಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT