ಶನಿವಾರ, ಮೇ 21, 2022
27 °C
ಪಿಯು ಪರೀಕ್ಷೆ: ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಸುಸೂತ್ರ ಪರೀಕ್ಷೆ ನಡೆಸಲು ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳು ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬುಧವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲು ತಿಳಿಸಲಾಗಿದೆ. ಪರೀಕ್ಷಾ ಸಿದ್ಧತೆ ಹಾಗೂ ವಹಿಸಬೇಕಾದ ಕ್ರಮಗಳ ಕುರಿತು ಈಗಾಗಲೇ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರೊಂದಿಗೆ ಮಾತನಾಡಿ ಅಗತ್ಯ ಸಲಹೆ– ಸೂಚನೆಗಳನ್ನು ನೀಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿ ಮಾಡಲಾಗುವುದು ಎಂದರು.

ಎಲ್ಲ ತಾಲ್ಲೂಕುಗಳ ತಹಶೀಲ್ದಾರರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರೊಂದಿಗೆ ಚರ್ಚಿಸಬೇಕು, ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ಪೊಲೀಸರಿಂದ ಬಂದೋಬಸ್ತ್ ಒದಗಿಸಬೇಕು ಎಂದರು.

12 ಸರ್ಕಾರಿ, 23 ಅನುದಾನಿತ ಹಾಗೂ 16 ಅನುದಾನ ರಹಿತ ಕಾಲೇಜುಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಅವುಗಳಿಗೆ 14 ಮಂದಿ ರೂಟ್ ಆಫೀಸರ್‌ಗಳನ್ನು ನೇಮಕ ಮಾಡಲಾಗಿದ್ದು, ಒಟ್ಟಾರೆ 31,308 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಅವರಲ್ಲಿ 15,652 ಬಾಲಕರು ಹಾಗೂ 15,656 ಬಾಲಕಿಯರಾಗಿದ್ದಾರೆ. ಕಲಾ ವಿಭಾಗದಲ್ಲಿ 4,329, ವಾಣಿಜ್ಯ ವಿಭಾಗದಲ್ಲಿ 14,987 ಹಾಗೂ ವಿಜ್ಞಾನ ವಿಭಾಗದಲ್ಲಿ 11,992 ವಿದ್ಯಾರ್ಥಿಗಳಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯಣ್ಣ ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.