ಶನಿವಾರ, ಸೆಪ್ಟೆಂಬರ್ 18, 2021
26 °C
ಆಸ್ಕರ್‌ ಫರ್ನಾಂಡಿಸ್‌ ಆರೋಗ್ಯ ವಿಚಾರಣೆ

ಪುದುಚೇರಿ ಮಾಜಿ ಸಿಎಂ ನಾರಾಯಣ ಸ್ವಾಮಿ ಮಂಗಳೂರಿಗೆ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ನಗರದ ಯೇನೆಪೋಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕಾಂಗ್ರೆಸ್‌ ಮುಖಂಡ ಆಸ್ಕರ್‌ ಫರ್ನಾಂಡಿಸ್‌ ಅವರ ಆರೋಗ್ಯ ವಿಚಾರಿಸಲು ಪುದುಚೇರಿಯ ಮಾಜಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಆಸ್ಕರ್ ಅವರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ಅವರು, ಚಿಕಿತ್ಸೆ ನೀಡುತ್ತಿದ್ದ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.

ಒಂದು ವಾರದಿಂದ ಆಸ್ಕರ್ ಫರ್ನಾಂಡಿಸ್ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಬಹುತೇಕ ಸಹಜ ಉಸಿರಾಟ ನಡೆಸುವಷ್ಟು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಕುಟುಂಬ ಸ್ಥರ ಧ್ವನಿಯನ್ನು ಗ್ರಹಿಸಿ ಅದಕ್ಕೆ ತಲೆ, ಕೈ-ಕಾಲು ಆಡಿಸುವ ಮೂಲಕ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜ್ಞೆ ಬರಲು ಇನ್ನೂ ಕೆಲದಿನ ಕಾಯಲಾಗುತ್ತಿದೆ. ವಾರಕ್ಕೆ ಮೂರು ಬಾರಿ ಆಸ್ಕರ್ ಅವರಿಗೆ ಡಯಾಲಿಸಿಸ್ ನಡೆಸಲಾಗುತ್ತಿದ್ದು, ಗುರುವಾರವೂ ಡಯಾಲಿಸಿಸ್ ಮಾಡಲಾಗಿದೆ. ರಕ್ತದೊತ್ತಡದಲ್ಲಿ ಏರಿಳಿತ ಕಂಡುಬಂದಿದ್ದರೂ ಪುನಃ ಸಹಜ ಸ್ಥಿತಿಗೆ ಬಂದಿದೆ. ಸಕ್ಕರೆ ಅಂಶವೂ ಸಹಜವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು