ಮಂಗಳೂರು: ಪುಳಿಂಚ ಸೇವಾ ಪ್ರತಿಷ್ಠಾನದ ವತಿಯಿಂದ ಪುಳಿಂಚ ಪ್ರಶಸ್ತಿ ಪ್ರದಾನ 2022, ಯಕ್ಷಗಾನ ಬಯಲಾಟ, ತುಳು ಹಾಸ್ಯ ನಾಟಕ ಪ್ರದರ್ಶನ ಮತ್ತು ಕಲ್ಲುರ್ಟಿ ದೈವದ ತ್ರೈಮಾಸಿಕ ಕೋಲ ಮತ್ತಿತರ ಕಾರ್ಯಕ್ರಮಗಳು ಏ.23ರಂದು ಸಂಜೆ 4ರಿಂದ ಬಂಟ್ವಾಳ ತಾಲ್ಲೂಕು ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಚೆಂಡೆ ಶ್ರೀ ಕಾರಣಿಕದ ಕಲ್ಲುರ್ಟಿ ದೈವಸ್ಥಾನ ಆವರಣದ ಬೋಳ್ನಾಡುಗುತ್ತು ದಿ.ಸರೋಜಿನಿ ರಾಮಯ್ಯ ಶೆಟ್ಟಿ ಪುಳಿಂಚ ಬಯಲು ರಂಗಮಂಟಪದಲ್ಲಿ ನಡೆಯಲಿದೆ.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪುಳಿಂಚ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಶ್ರೀಧರ ಶೆಟ್ಟಿ ಪುಳಿಂಚ, ಯಕ್ಷ ಕಲಾವಿದ ಪುಳಿಂಚ ರಾಮಯ್ಯ ಶೆಟ್ಟಿ ಹೆಸರಿನಲ್ಲಿ ಪ್ರತಿವರ್ಷ ಪುಳಿಂಚ ಪ್ರಶಸ್ತಿ ನೀಡುತ್ತಿದ್ದು, ಈ ಕಲಾವಿದರಾದ ಬೆಳ್ಳಾರೆ ವಿಶ್ವನಾಥ ರೈ, ಬಾಯಾರು ರಘುನಾಥ ಶೆಟ್ಟಿ, ಕೊಳ್ತಿಗೆ ನಾರಾಯಣಗೌಡ, ಜಪ್ಪು ದಯಾನಂದ ಶೆಟ್ಟಿ ಮತ್ತು ಮುಂಡಾಜೆ ಬಾಲಕೃಷ್ಣ ಶೆಟ್ಟಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ ₹ 25 ಸಾವಿರ ನಗದು, ಪ್ರಶಸ್ತಿಪತ್ರ ಒಳಗೊಂಡಿದೆ. ಕರ್ನಾಟಕ ಮೇಳದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದ ಪೂವಪ್ಪ ಪೂಜಾರಿ ಚೆಂಡೆ ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕಗಳಿಸಿದ ಜೀವಿತ ಚೆಂಡೆ ಅವರನ್ನು ಸನ್ಮಾನಿಸಲಾಗುವುದುಎಂದರು.

ಏ.23ರಂದು ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಯಕ್ಷಗಾನ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿ ಸಂಸ್ಮರಣಾ ಭಾಷಣ ಮಾಡುವರು. ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಅಭಿನಂದನಾ ಭಾಷಣ ಮಾಡುವರು ಎಂದು ವಿವರಿಸಿದರು.

ಅಂದು ಸಂಜೆ ಗಂಟೆ 4ಕ್ಕೆ ‘ಚಂದ್ರಾವಳಿ ವಿಲಾಸ’ ಯಕ್ಷಗಾನ ಹಾಸ್ಯ ಪ್ರಸಂಗ, ನಿಧಿ ಶೆಟ್ಟಿ ಪುಳಿಂಚ ಭರತನಾಟ್ಯ, ಗೌರವ್ ರೈ ತಂಡದಿಂದ ‘ವಂದೇ ಮಾತರಂ’ ದೇಶಭಕ್ತಿಗೀತೆ ಹಾಗೂ ರಾತ್ರಿಗಂಟೆ 9ಕ್ಕೆ ಚಾಪರ್ಕ ಕಲಾವಿದರಿಂದ ದೇವದಾಸ್ ಕಾಪಿಕಾಡ್ ನಿರ್ದೇಶಿಸಿರುವ ‘ಕುರೆಪಟ್’ ತುಳು ಹಾಸ್ಯ ನಾಟಕ ಪ್ರದರ್ಶನವಿದೆ. ರಾತ್ರಿ 12 ಗಂಟೆಯಿಂದ ಕಲ್ಲುರ್ಟಿ ದೈವದ ತ್ರೈವಾರ್ಷಿಕ ಕೋಲ ಮತ್ತು ಹರಕೆಯ ಕೋಲ ದೊಂದಿ ಬೆಳಕಿನಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಪುಳಿಂಚ ಪ್ರತಿಷ್ಠಾನದ ಸಲಹೆಗಾರ ಭಾಸ್ಕರ ರೈ ಕುಕ್ಕುವಳ್ಳಿ, ಕೋಶಾಧಿಕಾರಿ ಪ್ರತಿಭಾ ಶ್ರೀಧರ ಶೆಟ್ಟಿ ಪುಳಿಂಚ, ಬೆಜ್ಜದಗುತ್ತು ಸುನಿಲ್ಕುಮಾರ್ ಶೆಟ್ಟಿ, ಸತೀಶ್ ಪೂಜಾರಿ ಚೆಂಡೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.