ಬಂಟ್ವಾಳ: ಪ್ರಸಕ್ತ ಸಮಾಜದಲ್ಲಿ ಯಕ್ಷಗಾನ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಲಾಪೋಷಕರ ಅಗತ್ಯವಿದೆ. ಆ ಮೂಲಕ ದೇವಿಯ ಆರಾಧನೆ ಜೊತೆಗೆ ಕಲಾವಿದರ ಗುರುತಿಸುವಿಕೆ ಅರ್ಥಪೂರ್ಣವಾಗುತ್ತದೆ ಎಂದು ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಹೇಳಿದರು.

ಇಲ್ಲಿನ ಶಂಭೂರು ಗ್ರಾಮದ ಬೊಂಡಾಲ ಚಾರಿಟಬಲ್ ಟ್ರಸ್ಟ್ ವತಿಯಿಂದ ಶುಕ್ರವಾರ ರಾತ್ರಿ 49ನೇ ವರ್ಷದ ಕಟೀಲು ಮೇಳದ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಕಟೀಲು ಮೇಳದ ಭಾಗವತ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಇವರಿಗೆ ಬೊಂಡಾಲ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಕಟೀಲು ಮೇಳಗಳ ಯಜಮಾನ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಪತ್ರಕರ್ತ ಹರೀಶ ಮಾಂಬಾಡಿ ಮಾತನಾಡಿದರು.

ಪ್ರಶಸ್ತಿ ಸ್ವೀಕರಿಸಿದ ಭಾಗವತ ಗೋಪಾಲಕೃಷ್ಣ ಭಟ್ ಮಾತನಾಡಿ, ‘ಸಾಂಪ್ರದಾಯಿಕ ಚೌಕಟ್ಟಿನಲ್ಲಿ ‘ಬಲಿಪ ಪರಂಪರೆ’ ಮುಂದುವರಿಸುವ ಪ್ರಯತ್ನ ಮಾಡುತ್ತಿದ್ದೇನೆ’ ಎಂದರು.

ಇದೇ ವೇಳೆ ದಿವಂಗತ ಬಲಿಪ ನಾರಾಯಣ ಭಾಗವತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ನುಡಿನಮನ ಸಲ್ಲಿಸಿದರು. ನಿವೃತ್ತ ಶಿಕ್ಷಕ ನಾರಾಯಣ ಗೌಡ, ಸೀತಾರಾಮ ಶೆಟ್ಟಿ ಬೊಂಡಾಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.