ಪುತ್ತೂರು: ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 621 ಅಂಕ ಪಡೆದು ರಾಜ್ಯಕ್ಕೆ 5ನೇ ರ್ಯಾಂಕ್ ಮತ್ತು ಜಿಲ್ಲೆಗೆ 3ನೇ ರ್ಯಾಂಕ್ ಗಳಿಸಿದ ಈಶ್ವರಮಂಗಲದ ಹನುಮಗಿರಿಯ ಗಜಾನನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನನ್ಯ ಅವರ ನೆಟ್ಟಣಿಗೆ ಮುಡ್ನೂರು ಗ್ರಾಮದ ವಜ್ರಮೂಲೆಯಲ್ಲಿರುವ ಮನೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಶಿಧರ್ ಅವರು ಭೇಟಿ ನೀಡಿ, ಸನ್ಮಾನಿಸಿದರು.

ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿ ಹರಿಪ್ರಸಾದ್, ಮಂಗಳೂರು ಡಯಟ್ ಉಪನ್ಯಾಸಕ ತಾರೇಶ್ ನಾಯ್ಕ್, ಪುತ್ತೂರು ತಾಲ್ಲೂಕು ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಾಹಂ, ಗಜಾನನ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಶಿವರಾಮ ಶರ್ಮ ಕತ್ರಿಬೈಲು ಜತೆಗಿದ್ದರು.

ಶಶಿಧರ್ ಮಾತನಾಡಿ, ಈ ಬಾರಿಯೂ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ದ.ಕ.ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಉಳಿಸಿಕೊಂಡಿದೆ. ಕಳೆದ ವರ್ಷ ಶೇ 92.12 ಇದ್ದ ಫಲಿತಾಂಶ ಈ ಬಾರಿ ಶೇ 98.40ಕ್ಕೆ ತಲುಪಿದೆ. ಇದಕ್ಕೆ ವಿದ್ಯಾರ್ಥಿಗಳು ಕಾರಣರಾಗಿದ್ದು, ಅವರ ಸಾಧನೆಯನ್ನು ಗುರುತಿಸಲು ಜಿಲ್ಲೆಯಲ್ಲಿ ತಂಡವಾಗಿ ಕೆಲಸ ಮಾಡುತ್ತಿದ್ದೇವೆ. ಪುತ್ತೂರಿನಲ್ಲಿ ಮಿಷನ್ 95 ಪ್ಲಸ್ ಕನಸು ಕಂಡಿದ್ದೆವು, ಈಗ ಅದು ಜಿಲ್ಲೆಯಲ್ಲಿ ನನಸಾಗಿದೆ ಎಂದರು.

ವಿದ್ಯಾರ್ಥಿನಿ ಅನನ್ಯ ಮಾತನಾಡಿ, ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಬೇಕೆಂಬ ಆಸೆ ಇತ್ತು. ಆದರೆ, ವಿಜ್ಞಾನದಲ್ಲಿ 4 ಅಂಕ ಕೈತಪ್ಪಿದೆ. ಶಿಕ್ಷಕರ ಮತ್ತು ಪೋಷಕರ ಸಹಕಾರದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ ಎಂದಳು.

ಅನನ್ಯ ತಾಯಿ ಪ್ರಶಾಂತಿ ಜಿ.ಕೆ., ತಂದೆ ಕಮಲಾಕ್ಷ ಎ. ಜತೆಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-29-722554158

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.