ಪುತ್ತೂರು: ಬಿಜೆಪಿ ಮುಖಂಡ ಅರುಣ್ಕುಮಾರ್ ಪುತ್ತಿಲ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ ನೀಡಿರುವ ಬೆನ್ನಲ್ಲೇ, ಅವರ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿ ದೂರು ನೀಡಿದ್ದ ಸಂತ್ರಸ್ತ ಮಹಿಳೆ ಬುಧವಾರ ತನ್ನ ಪುತ್ರಿಯೊಂದಿಗೆ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ರುದ್ರಾಭಿಷೇಕ ಸೇವೆ ಸಲ್ಲಿಸಿ, ಸಂಕಲ್ಪ ನೆರವೇರಿಸಿ ನ್ಯಾಯಕ್ಕಾಗಿ ದೇವರ ಮೊರೆ ಹೋಗಿದ್ದಾರೆ.

ಮಹಿಳೆ ದೇವಸ್ಥಾನಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಅರುಣ್ಕುಮಾರ್ ಪುತ್ತಿಲ ಅವರು ತಮ್ಮ ಬೆಂಬಲಿಗರೊಂದಿಗೆ ದೇವಸ್ಥಾನಕ್ಕೆ ಬಂದು ದೇವರಿಗೆ ಮಲ್ಲಿಗೆ ಸಮರ್ಪಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಪುತ್ತಿಲ, ‘ಈ ಹಿಂದೆಯೂ ನನ್ನ ವಿರುದ್ಧ ಮಾಡಲಾದ ಷಡ್ಯಂತ್ರಗಳ ಬಗ್ಗೆ ಜಿಲ್ಲೆಯ ಜನರಿಗೆ ತಿಳಿದಿದೆ. ಮತ್ತೆ ಕಾಣದ ಕೈಗಳು ವ್ಯವಸ್ಥಿತ ಪಿತೂರಿ ಮಾಡಿ, ನನ್ನನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆಸಿವೆ. ನಾನು ಮಹಾಲಿಂಗೇಶ್ವರ ದೇವರು, ಉಳ್ಳಾಲ್ತಿ ಅಮ್ಮನವರಲ್ಲಿ ನಂಬಿಕೆ ಇಟ್ಟುಕೊಂಡು ಬದುಕುತ್ತಿದ್ದೇನೆ. ಸತ್ಯಕ್ಕೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರಸನ್ನಕುಮಾರ್ ಮಾರ್ತ, ಶ್ರೀಕೃಷ್ಣ ಉಪಾಧ್ಯಾಯ, ಪ್ರವೀಣ್ ರೈ ತಿಂಗಳಾಡಿ, ಅನಿಲ್ ತೆಂಕಿಲ, ಮನೀಶ್ ಕುಲಾಲ್ ಪುತ್ತಿಲ ಅವರ ಜತೆಗಿದ್ದರು.

`ನನಗೆ ನ್ಯಾಯ ಬೇಕು, ಅನ್ಯಾಯವಾಗಿದೆ, ಪುತ್ತೂರಿನ ಮಹಾಲಿಂಗೇಶ್ವರ ದೇವಳಕ್ಕೆ ಪ್ರಾರ್ಥನೆ ಮಾಡಲು ಹೋಗುತ್ತಿದ್ದೇನೆ’ ಎಂದು ಸಂತ್ರಸ್ಥೆ ಮಹಿಳೆ ಮಂಗಳವಾರ ಆಡಿಯೊ ರೆಕಾರ್ಡ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದರು.

`ನಮ್ಮ ನಾಯಕ ಅರುಣ್ಕುಮಾರ್ ಪುತ್ತಿಲ ಅವರು ಬುಧವಾರ ಬೆಳಿಗ್ಗೆ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಪ್ರಾರ್ಥನೆ ಮಾಡಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರೋಣ’ ಎಂದು ಪುತ್ತಿಲ ಬೆಂಬಲಿಗರೂ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ರವಾನಿಸಿದ್ದರು.

ಪುತ್ತೂರು: ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಅರುಣ್ಕುಮಾರ್ ಪುತ್ತಿಲ

ಬುಧವಾರ ಇಲ್ಲಿನ ಅರುಣ್ಕುಮಾರ್ ಪುತ್ತಿಲ ವಿರುದ್ಧ ಮಹಿಳೆಯೊಬ್ಬರ ಅತ್ಯಾಚಾರ ಆರೋಪದಡಿ ದಾಖಲಾಗಿರುವ ಎಫ್ಐಆರ್ ಮತ್ತು ನ್ಯಾಯಾಲಯದ ಮುಂದಿನ ತನಿಖಾ ಪ್ರಕ್ರಿಯೆಗೆ ರಾಜ್ಯ ಹೈಕೋಟರ್್ ತಡೆಯಾಜ್ಞೆ ನೀಡಿದೆ. ಅರುಣ್ಕುಮಾರ್ ಪುತ್ತಿಲ ಅವರು ತನ್ನನ್ನು 2023ನೇ ಜೂನ್1ರಿಂದ 8ರ ನಡುವಿನ ಅವಧಿಯಲ್ಲಿ ಬೆಂಗಳೂರಿನ ಹೋಟೆಲೊಂದಕ್ಕೆ ಕರೆಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿ ತನ್ನ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಸಂತ್ರಸ್ತೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಆರಂಭದಲ್ಲಿ ಪುತ್ತೂರಿನ ಮಹಿಳಾ ಠಾಣೆಯ ಪೊಲೀಸರು ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯನಂಬಿಕೆ ದ್ರೋಹಕೊಲೆ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಅರುಣ್ಕುಮಾರ್ ಪುತ್ತಿಲ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಅರುಣ್ಕುಮಾರ್ ಪುತ್ತಿಲ ಅವರು ಪುತ್ತೂರು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದರು.ಆ ಬಳಿಕ ಸಂತ್ರಸ್ತೆ ಮಹಿಳೆ ಪುತ್ತೂರು ನ್ಯಾಯಾಧೀಶರ ಎದುರು ಹಾಜರಾಗಿ ಹೇಳಿಕೆ ನೀಡಿದ್ದರು. ಬಳಿಕದ ಬೆಳವಣಿಗೆಯಲ್ಲಿ ಪೊಲೀಸರು ಪುತ್ತಿಲ ಅವರ ವಿರುದ್ಧದ ಪ್ರಕರಣಕ್ಕೆ ಅತ್ಯಾಚಾರ ಆರೋಪ ಸೇರ್ಪಡೆಗೊಳಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಘಟನೆ ಬೆಂಗಳೂರು ವ್ಯಾಪ್ತಿಯಲ್ಲಿ ನಡೆದಿರುವುದರಿಂದ ಈ ಪ್ರಕರಣವನ್ನು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವಗರ್ಾಯಿಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಅಜರ್ಿ ಸಲ್ಲಿಸಿದ್ದರು. ಪೊಲೀಸರ ಅಜರ್ಿಯನ್ನು ಮಾನ್ಯ ಮಾಡಿದ್ದ ಪುತ್ತೂರು ನ್ಯಾಯಾಲಯ ಇಡೀ ಪ್ರಕರಣವನ್ನು ಮುಂದಿನ ವಿಚಾರಣೆಗಾಗಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವಗರ್ಾಯಿಸಿ ಆದೇಶ ಹೊರಡಿಸಿತ್ತು. ಈ ನಡುವೆ ಅರುಣ್ಕುಮಾರ್ ಪುತ್ತಿಲ ಅವರು ತನ್ನ ವಿರುದ್ಧ ದಾಖಲಾದ ಪ್ರಕರಣವನ್ನು ಪ್ರಶ್ನಿಸಿ ಹೈಕೋಟರ್್ ಮೆಟ್ಟಲೇರಿದ್ದರು. ಅರುಣ್ಕುಮಾರ್ ಪುತ್ತಿಲ ಅವರ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಪಿ.ಪಿ.ಹೆಗ್ಡೆ ಅವರು ಮಹಿಳೆಯ ದೂರು ರಾಜಕೀಯ ಷಡ್ಯಂತ್ರದಿಂದ ಕೂಡಿದೆ. 47 ವರ್ಷದ ಮಹಿಳೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಅತ್ಯಾಚಾರ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಘಟನೆ ಒಂದು ವರ್ಷದ ಹಿಂದೆ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಈ ದೂರು ಸುಳ್ಳಿನಿಂದ ಕೂಡಿದೆ. ಅರುಣ್ ಕುಮಾರ್ ಪುತ್ತಿಲ ಅವರೊಂದಿಗೆ ಮಾತನಾಡಿದ ಆಡಿಯೋ ವೈರಲ್ ಆದ ಬಳಿಕ ಹಾಗೂ ಈ ವಿಚಾರಕ್ಕೆ ಸಂಬಂಧಿಸಿ ನ್ಯಾಯಾಲಯ ತಡೆಯಾಜ್ಞೆ ನೀಡಿದ ನಂತರ ಅತ್ಯಾಚಾರದ ಆರೋಪ ಮಾಡಲಾಗಿದೆ.ಇದು ಸುಳ್ಳು ಆರೋಪವಾಗಿದ್ದು ಈ ಕುರಿತು ದಾಖಲಾಗಿರುವ ಎಫ್ಐಆರ್ ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ತಡೆ ನೀಡಬೇಕು ಎಂದು ಪಿ.ಪಿ.ಹೆಗ್ಡೆ ಅವರು ವಾದಿಸಿದ್ದರು. ಈ ವಾದವನ್ನು ಪುರಸ್ಕರಿಸಿದ ಹೈಕೋಟರ್್ ನ್ಯಾಯಾಧೀಶರು ಎಫ್ಐಆರ್ ಮತ್ತು ಪ್ರಕರಣದ ಮುಂದಿನ ತನಿಖೆಗೆ ತಡೆಯಾಜ್ಞೆ ನೀಡಿದ್ದಾರೆ.

ನ್ಯಾಯಾಂಗ ಹೋರಾಟದ ಬೆನ್ನಲ್ಲೇ ದೇವರ ಮೊರೆ...!!

ಅರುಣ್ಕುಮಾರ್ ಪುತ್ತಿಲ ಅವರ ವಿರುದ್ಧ ದಾಖಲಾದ ಎಫ್ಐಆರ್ ಮತ್ತು ಮುಂದಿನ ತನಿಖೆಗೆ ಹೈಕೋಟರ್್ ತಡೆಯಾಜ್ಞೆ ನೀಡಿರುವ ಬೆನ್ನಲ್ಲೇ ಅರುಣ್ಕುಮಾರ್ ಪುತ್ತಿಲ ಅವರ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿ ದೂರು ನೀಡಿದ್ದ ಸಂತ್ರಸ್ತ ಮಹಿಳೆ ತನ್ನ ಪುತ್ರಿಯೊಂದಿಗೆ ಬುಧವಾರ ಬೆಳಿಗ್ಗೆ ಪುತ್ತೂರಿನ ಮಹಾಲಿಂಗೇಶ್ವರ ದೇವಳಕ್ಕೆ ಭೇಟಿ ನೀಡಿ ರುದ್ರಾಭಿಷೇಕ ಸೇವೆ ಸಲ್ಲಿಸಿ ಸಂಕಲ್ಪ ನೆರವೇರಿಸಿ ನ್ಯಾಯಕ್ಕಾಗಿ ದೇವರ ಮೊರೆ ಹೋಗಿದ್ದಾರೆ. ಸಂತ್ರಸ್ತೆಯಾದ ನಾಳೆ ಬೆಳಿಗ್ಗೆ 8.30 ರ ವೇಳೆಗೆ `ನನಗೆ ನ್ಯಾಯ ಬೇಕು ಅನ್ಯಾಯವಾಗಿದೆ ಎಂದು ಪುತ್ತೂರಿನ ಮಹಾಲಿಂಗೇಶ್ವರ ದೇವಳಕ್ಕೆ ಪ್ರಾರ್ಥನೆ ಮಾಡಲು ಹೋಗುತ್ತಿದ್ದೇನೆ. ಈ ಪುಣ್ಯ ಭೂಮಿಯಲ್ಲಿ ಸತ್ಯ ನಾಶವಾಗಬಾರದು ಸತ್ಯ ಸತ್ತು ಹೋಗಬಾರದು ಭಗವಂತನೇ ಎಲ್ಲದಕ್ಕೂ ಉತ್ತರ ಕೊಡಲಿ ನನಗೆ ನ್ಯಾಯ ಸಿಗಲಿ. ದೇವರ ಆಶೀವರ್ಾದ ಬೇಕು ಹಾಗಾಗಿ ನಾನು ಪ್ರಾರ್ಥನೆ ಮಾಡಿ ಬರುತ್ತೇನೆ' ಎಂದು ಸಂತ್ರಸ್ಥೆ ಮಹಿಳೆ ಮಂಗಳವಾರ ಆಡಿಯೋ ವಾಯಿಸ್ನ್ನು ಸಾಮಾಜಿಕ ಜಾಲತಾಣಗಳಲ್ಲಿ ರವಾನಿಸಿದ್ದರು. ಇದಾದ ಬೆನ್ನಲ್ಲೇ ಅರುಣ್ಕುಮಾರ್ ಪುತ್ತಿಲ ಅವರು ತನ್ನ ಬೆಂಬಲಿಗರೊಂದಿಗೆ ಪುತ್ತೂರಿನ ಮಹಾಲಿಂಗೇಶ್ವರ ದೇವಳಕ್ಕೆ ಭೇಟಿ ನೀಡಿ ದೇವರಿಗೆ ಮಲ್ಲಿಗೆ ಸಮಪರ್ಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ದೇವಳದ ನಡೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ದೇವಳದ ಪ್ರಧಾನ ಅರ್ಚಕರಾದ ವೇದಮೂತರ್ಿ ವಸಂತ ಕೆದಿಲಾಯ ಅವರು ಯಾವುದೇ ಅಪವಾದವಿದ್ದರೂ ಸತ್ಯಕ್ಕೆ ನ್ಯಾಯ ಸಿಗಬೇಕು. ಅರುಣ್ಕುಮಾರ್ ಪುತ್ತಿಲ ಅವರು ಮಾಡುವ ಪ್ರತಿಯೊಂದು ಕಾರ್ಯಕ್ಕೂ ದೇವರ ಸದಾ ಅನುಗ್ರಹ ಸಿಗಲಿ ಎಂದು ಪ್ರಾಥರ್ಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅರುಣ್ಕುಮಾರ್ ಪುತ್ತಿಲ ಅವರು ಈ ಹಿಂದೆಯೂ ನನ್ನ ವಿರುದ್ಧ ಮಾಡಿದ ಷಡ್ಯಂತ್ರಗಳ ಬಗ್ಗೆ ಪುತ್ತೂರಿನ ಜನತೆಗೆ ಜಿಲ್ಲೆಯ ಜನತೆಗೆ ತಿಳಿದಿದೆ. ಮತ್ತೆ ಕಾಣದ ಕೈಗಳು ವ್ಯವಸ್ಥಿತವಾದ ಪಿತೂರಿಯ ಈ ಕಾರ್ಯದ ಮೂಲಕ ನನ್ನನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆಸಿದ್ದಾರೆ. ಆದರೆ ನಾನು ಮಹಾಲಿಂಗೇಶ್ವರ ದೇವರು ಉಳ್ಳಾಲ್ತಿ ಅಮ್ಮನವರಲ್ಲಿ ನಂಬಿಕೆಯಿಟ್ಟುಕೊಂಡು ಬದುಕುತ್ತಿದ್ದೇನೆ .ಯಾವತ್ತೂ ಸತ್ಯಕ್ಕೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ನನ್ನ ಜತೆಗಿದೆ ಎಂದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನಕುಮಾರ್ ಮಾರ್ತ ಶ್ರೀಕೃಷ್ಣ ಉಪಾಧ್ಯಾಯ ಪ್ರವೀಣ್ ರೈ ತಿಂಗಳಾಡಿ ಅನಿಲ್ ತೆಂಕಿಲ ಮನೀಶ್ ಕುಲಾಲ್ ಸಹಿತ ಹಲವಾರು ಮಂದಿ ಕಾರ್ಯಕರ್ತರು ಪುತ್ತಿಲ ಅವರ ಜತೆಗಿದ್ದರು. `ನಮ್ಮ ನಾಯಕ ಅರುಣ್ಕುಮಾರ್ ಪುತ್ತಿಲ ಅವರು ಬುಧವಾರ ಬೆಳಿಗ್ಗೆ 8.30ಕ್ಕೆ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಪ್ರಾರ್ಥನೆ ಮಾಡಲಿದ್ದಾರೆ. ಅವರಿಗೆ ರಾಜಕೀಯದಲ್ಲಿ ಬಂದಿರುವ ಕಳಂಕ ನಿವಾರಣೆಗಾಗಿ ಹಾಗೂ ಹಿಂದೂ ಸಮಾಜಕ್ಕಾಗಿ ಅವರು ಇನ್ನಷ್ಟು ಸೇವೆ ಮಾಡುವಂತಾಗಲು ದೇವರು ಅನುಗ್ರಹಿಸಲಿ ಎಂದು ಪುತ್ತೂರಿನ ಒಡೆಯ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಪ್ರಾರ್ಥನೆ ಮಾಡೋಣ.ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರೋಣ' ಎಂದು ಪುತ್ತಿಲ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ರವಾನಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.