ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ಸಾವಿರ ಎಕರೆಗೂ ಅಧಿಕ ಹಡಿಲು ಬಿದ್ದ ಕೃಷಿ ಭೂಮಿಗಳಿರುವ ಮಾಹಿತಿ ಲಭ್ಯವಾಗಿದ್ದು, ಭತ್ತದ ಕೃಷಿ ಮಾಡುವ ಮೂಲಕ ಕೃಷಿಗೆ ಹೆಚ್ಚಿನ ಒತ್ತು ನೀಡುವಂತೆ ಕ್ಷೇತ್ರವಾರು ಆಯಾ ಶಾಸಕರ ಜತೆ ಮಾತನಾಡಿದ್ದೇನೆ. ಪುತ್ತೂರು ತಾಲ್ಲೂಕಿನಲ್ಲಿ ಹಡಿಲು ಬಿದ್ದಿರುವ 51 ಎಕರೆ ಭೂಮಿಯಲ್ಲಿ ಭತ್ತದ ಕೃಷಿಯನ್ನು ಬೆಳೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲಿದ್ದೇವೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ತಾಲ್ಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ಭತ್ತದ ಕೃಷಿಗೆ ಒತ್ತು ನೀಡುವ ನಿಟ್ಟಿನಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಕೃಷಿ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಡಿಕೆ ಕೃಷಿ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ಹಡಿಲು ಬಿದ್ದ ಕೃಷಿಭೂಮಿ ಕಡಿಮೆ ಇದೆ. ತಾಲ್ಲೂಕಿನಲ್ಲಿ ಸುಮಾರು 51 ಎಕರೆ ಹಡಿಲು ಬಿದ್ದ ಕೃಷಿ ಭೂಮಿ ಗುರುತಿಸಲಾಗಿದೆ. ಬಿತ್ತನೆ ಬೀಜ, ನೇಜಿ ತಯಾರಿ, ಉಳುಮೆಗೆ ಸಂಬಂಧಿಸಿ ಹಾಗೂ ಮೂಲ ಕೃಷಿಕರ ಸಹಕಾರ ದೊಂದಿಗೆ ಎಲ್ಲರೂ ಒಟ್ಟಾಗಿ ಇಲ್ಲಿ ಭತ್ತದ ಕೃಷಿ ಮಾಡುವ ಕುರಿತು ತೀರ್ಮಾನ ತೆಗೆದುಕೊಂಡಿದ್ದೇವೆ. ಎಂ.ಎ. 4 ಎಂಬ ಭತ್ತದ ತಳಿಯ ಕೃಷಿಯನ್ನು ಮಾಡುವ ಕುರಿತು ಈಗಾಗಲೇ ತೀರ್ಮಾನ ಕೈಗೊಳ್ಳಲಾಗಿದೆ’ ಎಂದರು.

‘ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ದಂತೆ ಸಮೀಕ್ಷೆ ನಡೆಸಲು ಕೇಂದ್ರದ ತಂಡವೊಂದು ಬರಲಿದೆ ಎಂದು ಮಾಹಿತಿ ಲಭ್ಯವಾಗಿದೆ. ಈಗಾಗಲೇ ಜಿಲ್ಲಾಧಿಕಾರಿಯ ಮೂಲಕ ಸುಮಾರು ₹ 80 ಕೋಟಿಯ ಪರಿಹಾರದ ಸಮೀಕ್ಷೆ ಗಳು ಹೋಗಿದೆ. ಮತ್ತೆ ಸುಮಾರು ₹ 125 ಕೋಟಿಯನ್ನು ಲೋಕೋಪಯೋಗಿ, ಗ್ರಾಮ ಪಂಚಾಯಿತಿ ರಸ್ತೆಗಳು, ಮನೆ ಕುಸಿತ ಘಟನೆಗಳು, ಸಮುದ್ರ ಕೊರೆತ ಪರಿಹಾರದ ಮೊತ್ತ ಇಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಒಟ್ಟಾರೆ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಗರಿಷ್ಠ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ’ ಎಂದರು.

ಶಾಸಕ ಸಂಜೀವ ಮಠಂದೂರು, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸೀತಾ, ತಾಲ್ಲೂಕು ಪಂಚಾಯಿತಿ ಇಒ ನವೀನ್ ಕುಮಾರ್ ಭಂಡಾರಿ ಇದ್ದರು. ಪುತ್ತೂರು, ಉಪ್ಪಿನಂಗಡಿ, ಕಡಬ ಮತ್ತು ವಿಟ್ಲದ ಕೃಷಿ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.