ಪುತ್ತೂರು: ತಾಲ್ಲೂಕಿನ ಪಡುವನ್ನೂರು ಗ್ರಾಮದ ಸಸಿಹಿತ್ಲು ಎಂಬಲ್ಲಿ ವ್ಯಕ್ತಿಯೊಬ್ಬರಿಗೆ ಐವರು ಸೇರಿಕೊಂಡು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಬಗ್ಗೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾಗಿರುವ ಪಡುವನ್ನೂರು ಗ್ರಾಮದ ಸಸಿಹಿತ್ಲು ನಿವಾಸಿ ಮಹಮ್ಮದ್ (56) ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

‘ಮನೆಯ ಸಿಟೌಟ್ನಲ್ಲಿ ಕುಳಿತ್ತಿದ್ದ ವೇಳೆ ಬಂದ ಅಬ್ದುಲ್ ರಹಮಾನ್, ಸಾಹುಲ್ ಹಮೀದ್, ಮಿಖ್ಖಾದ್, ರಶೀದ್, ಮೊಯ್ದು ಎಂಬುವರು ಅವಾಚ್ಯ ಶಬ್ದಗಳಿಂದ ಬೈದು, ನಮ್ಮ ₹40 ಸಾವಿರ ಹಣ ತಿಂದಿದ್ದೀಯ. ಇದು ನನ್ನ ಜಾಗ, ನೀನು ಯಾಕೆ ಕಾಂಪೌಂಡ್ ನಿರ್ಮಿಸುತ್ತಿಯಾ ಎಂದು ಪ್ರಶ್ನಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ. ಈ ವೇಳೆ ಪತ್ನಿ ಸಫಿಯಾ ಅವರು ಬರುವು ದನ್ನು ಕಂಡು ಆರೋಪಿಗಳು ಪರಾರಿಯಾ ಗಿದ್ದಾರೆ’ ಎಂದು ಮಹಮ್ಮದ್ ಅವರು ಸಂಪ್ಯ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಜಾಗದ ವಿವಾದದಿಂದ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-29-1474565779

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.