ಪುತ್ತೂರು: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ ಖಾತೆಯಲ್ಲಿದ್ದ ₹1,11,800 ಹಣವನ್ನು ವರ್ಗಾವಣೆ ಮಾಡಿಕೊಂಡು ವಂಚಿಸಿದ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುತ್ತೂರು ನಗರದ ಹೊರವಲಯದ ಪರ್ಲಡ್ಕ ಪಾಂಗ್ಲಾಯಿ ನಿವಾಸಿ ಶಿವಶಂಕರ್ ಹಣ ಕಳೆದುಕೊಂಡವರು.

ಪುತ್ತೂರು ಯೂನಿಯನ್ ಬ್ಯಾಂಕ್ನಲ್ಲಿರುವ ಶಿವಶಂಕರ್ ಅವರ ಖಾತೆಯಿಂದ ಮೇ 1ರಂದು ₹ 51 ಸಾವಿರ, 2ರಂದು ₹ 49 ಸಾವಿರ, 3ರಂದು ₹1,500 ಮತ್ತು ₹10,300 ಹಣ ವರ್ಗಾವಣೆ ಆಗಿತ್ತು. ಈ ಕುರಿತು ಅವರು ಬ್ಯಾಂಕ್ನಲ್ಲಿ ವಿಚಾರಿಸಿದಾಗ ಹಣ ವರ್ಗಾವಣೆ ಆಗಿರುವ ಮಾಹಿತಿ ಸಿಕ್ಕಿತ್ತು. ಈ ಬಗ್ಗೆ ಅವರು ಸಹಾಯವಾಣಿಗೆ ದೂರು ನೀಡಿದ್ದರು. ಆದರೆ, ಹಣ ವಾಪಸಾಗದ ಕಾರಣ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-29-1645446079

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.