ಪುತ್ತೂರು: ನಗರದ ಹೊರವಲಯದ ಬನ್ನೂರಿನಲ್ಲಿ ವೈಜ್ಞಾನಿಕ ಘನತ್ಯಾಜ್ಯ ಸಂಸ್ಕರಣಾ ಘಟಕವಿದ್ದರೂ, ಪಕ್ಕದಲ್ಲೇ ಇರುವ ದೈವಸ್ಥಾನ ಸಂಪರ್ಕಿಸುವ ದಾರಿ ಬದಿ ಕಸ ರಾಶಿ ಹಾಕಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನು ವಿರೋಧಿಸಿ ಸ್ಥಳೀಯರು ಕಸ ಸಾಗಾಟದ ಲಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಭೇಟಿ ನೀಡಿದ ಪೌರಾಯುಕ್ತ ಮೂರು ದಿನದೊಳಗೆ ಕಸವನ್ನು ತೆರವು ಮಾಡುವ ಭರವಸೆ ನೀಡಿದರು.

ನಗರಸಭೆ ಮಾಜಿ ಸದಸ್ಯೆ ಗೌರಿ ಬನ್ನೂರು, ಕಾರ್ತಿಕ್ ಕುಲಾಲ್ ನೆಕ್ಕಿಲು, ರಾಮಚಂದ್ರ ಭಟ್ ಮಾತನಾಡಿದರು.

ಸ್ಥಳಕ್ಕೆ ಭೇಟಿ ನೀಡಿದ ನಗರಸಭೆಯ ಪೌರಾಯುಕ್ತೆ ವಿದ್ಯಾ ಎಂ. ಕಾಳೆ, ನಗರಸಭೆಯ ಘನ ತ್ಯಾಜ್ಯ ಸಂಸ್ಕರಣಾ ಘಟಕದ ಬಳಿ ಖಾಸಗಿಯವರು ಕಸ ತಂದು ಹಾಕಿರುವ ಕುರಿತು ಸ್ಥಳೀಯರಿಂದ ವಿಡಿಯೊ ದಾಖಲೆ ಪಡೆದುಕೊಂಡು ಪೊಲೀಸರಿಗೆ ದೂರು ನೀಡಲಾಗುವುದು. ಜತೆಗೆ ತ್ಯಾಜ್ಯ ಸಂಸ್ಕರಣಾ ಘಟಕದ ಕಡೆಯಿಂದ ಸಿಮೆಂಟ್ ಕಾರ್ಖಾನೆಗೆ ಹೋಗುವ ಒಣಕಸಗಳನ್ನು ತಾತ್ಕಾಲಿಕವಾಗಿ ಹೊರಗೆ ಹಾಕಲಾಗಿದ್ದು, ಅದನ್ನು ಮೂರು ದಿನದೊಳಗೆ ತೆರವು ಮಾಡಲಾಗುವುದು ಎಂದು ಭರವಸೆ ನೀಡಿದರು. ಈ ಭರವಸೆಯ ಮೇಲೆ ಸ್ಥಳೀಯರು ಪ್ರತಿಭಟನೆಯನ್ನು ಹಿಂಪಡೆದುಕೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-29-462368329

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.