ಪುತ್ತೂರು: ಬಿಜೆಪಿಯವರು ಭಾವನೆಗಳ ಜತೆ ಆಟವಾಡುತ್ತಿದ್ದಾರೆಯೇ ಹೊರತು ಜನತೆಯ ಬದುಕು ಕಟ್ಟುವ ಕೆಲಸ ಮಾಡಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ದೂರಿದರು.

ಪುತ್ತೂರು ತಾಲ್ಲೂಕಿನ ಕೋಡಿಂಬಾಡಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಕೋಡಿಂಬಾಡಿ -ಬೆಳ್ಳಿಪ್ಪಾಡಿ ವಲಯ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಸೋಮವಾರ ನಡೆದ ಬಿಜೆಪಿ ‘ಸುಳ್ಳುಗಳಿಗೆ ಕಾಂಗ್ರೆಸ್ ಉತ್ತರ -ಜಾಗೃತಿ ಸಭೆ’ಯಲ್ಲಿ ಅವರು ಮಾತನಾಡಿದರು.

ಶಾಸಕ ಅಶೋಕ್ಕುಮಾರ್ ರೈ ಮಾತನಾಡಿ, ನಮಗೆ ಇನ್ನೂ 3 ವರ್ಷ ಅಧಿಕಾರ ಚಲಾಯಿಸಲು, ಅಭಿವೃದ್ಧಿ ಕೆಲಸಗಳನ್ನು ಮಾಡಲು ಅವಕಾಶ ಮಾಡಿಕೊಡಿ. ಸುಳ್ಳುಗಳ ಸುರಿಮಳೆಯ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬೇಡಿ. ಜಾತಿ-ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಲು ಹೋಗಬೇಡಿ ಎಂದರು.

ಇನ್ನು ಮುಂದೆ ಸುಳ್ಳಿನ ಮೂಲಕ ಜನರನ್ನು ದಾರಿತಪ್ಪಿಸಲು ನಿಮ್ಮಂದ ಆಗದು, ನೀವು ವಿಶ್ರಾಂತಿ ತೆಗೆದುಕೊಳ್ಳಿ. ಬಡವರ ಕಣ್ಣೀರೊರೆಸುವ ಜತೆಗೆ ಪುತ್ತೂರು ಕ್ಷೇತ್ರದಲ್ಲಿ ಇತಿಹಾಸ ಪುಟಗಳಲ್ಲಿ ದಾಖಲಾಗುವ ಕೆಲಸಗಳನ್ನು ನಾವು ಮಾಡಿ ತೋರಿಸುತ್ತೇವೆ ಎಂದರು.

ಜವಾಹರಲಾಲ್ ಮಂಚ್ ಜಿಲ್ಲಾ ಘಟಕದ ಅಧ್ಯಕ್ಷೆ ಶೈಲಜಾ ರಾಜೇಶ್, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ, ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು ಮಾತನಾಡಿದರು.

ಪಕ್ಷದ ಮುಖಂಡರಾದ ಡಾ.ರಾಜಾರಾಮ್ ಕೆ.ಬಿ., ಸುಭಾಶ್ ರೈ ಕೊಳ್ನಾಡು, ಜೋಕಿಂ ಡಿಸೋಜ, ಮರಳೀಧರ್ ರೈ ಮಠಂತಬೆಟ್ಟು, ಉಲ್ಲಾಸ್ ಕೋಟ್ಯಾನ್, ಮೋನಪ್ಪ ಗೌಡ, ಯೋಗೀಶ್ ಸಾಮಾನಿ, ಮಲ್ಲಿಕಾ ಅಶೋಕ್ ಪೂಜಾರಿ, ಜಯಪ್ರಕಾಶ್ ಬದಿನಾರು, ಯು.ಟಿ.ತೌಸೀಫ್, ನಝೀರ್ ಮಠ, ನಿರಂಜನ ರೈ ಮಠಂತಬೆಟ್ಟು, ಪ್ರಭಾಕರ ಸಾಮಾನಿ, ಯತೀಶ್ ಶೆಟ್ಟಿ, ಪದ್ಮನಾಭ ಶೆಟ್ಟಿ, ಪದ್ಮನಾಭ ಪಕ್ಕಳ, ಜಗನ್ನಾಥ ಶೆಟ್ಟಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.