ಭಾನುವಾರ, ಅಕ್ಟೋಬರ್ 2, 2022
19 °C
ಪುತ್ತೂರು ನಗರಸಭೆ ಸಾಮಾನ್ಯ ಸಭೆ, ವಿವಿಧ ಕಾಮಗಾರಿ ಕರಿತು ಚರ್ಚೆ

‘ವಾರ್ಡ್‌ ಸದಸ್ಯರ ಗಮನಕ್ಕೆ ತನ್ನಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪುತ್ತೂರು: ನಗರಸಭೆಯ ವಾರ್ಡ್‌ಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳುವಾಗ ಆ ವಾರ್ಡ್‌ನ ಸದಸ್ಯರ ಗಮನಕ್ಕೆ ತರಬೇಕು ಎಂದು ನಗರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರು ಆಗ್ರಹಿಸಿದರು.

ಕೆ. ಜೀವಂಧರ್ ಜೈನ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ  ನಡೆಯಿತು.

ನಗರಸಭೆಯ 31 ವಾರ್ಡ್‌ಗಳಲ್ಲಿ ರಸ್ತೆ ಬದಿಯಲ್ಲಿ ಬೆಳೆದಿರುವ ಪೊದೆ ತೆರವುಗೊಳಿಸುವ ಬಗ್ಗೆ ಅಂದಾಜು ಪಟ್ಟಿಯ ಅನುಮೋದನೆಗಾಗಿ ಸಭೆಯ ಗಮನಕ್ಕೆ ತರಲಾಯಿತು.ಸದಸ್ಯ ಭಾಮಿ ಅಶೋಕ ಶೆಣೈ ಅವರು ಈ ಕಾಮಗಾರಿಗೆ ₹13 ಲಕ್ಷ ಮೀಸಲಿಟ್ಟಿದ್ದು ಇದು ಸಾಕಾಗುವುದಿಲ್ಲ. ಇದನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯು ಚತುಷ್ಪಥ ರಸ್ತೆಯಾಗಿ ಪರಿತವರ್ತನೆಯಾಗುತ್ತಿದ್ದು, ಈ ಬಗ್ಗೆ ಮಾಹಿತಿಯನ್ನು ನೀಡುವಂತೆ ಸಂಬಂಧಿಸಿದ ಇಲಾಖೆಗೆ ಪತ್ರ ಬರೆಯಲು ತೀರ್ಮಾನಿಸಲಾಯಿತು.

‌ವಾರದ ಸಂತೆ ರದ್ದು
ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ನಿಟ್ಟಿನಲ್ಲಿ ಅ.15ರಂದು ಸೋಮವಾರ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುವ ವಾರದ ಸಂತೆಯನ್ನು ರದ್ದುಪಡಿಸಲಾಗಿದೆ. ಆದಿನ ವ್ಯಾಪಾರಸ್ಥರು ಕಿಲ್ಲೆ ಮೈದಾನದ ಒಳಗಡೆ ಹಾಗೂ ರಸ್ತೆ ಬದಿಗಳಲ್ಲಿ ವ್ಯಾಪಾರ ನಡೆಸಬಾರದು. ಸಾರ್ವಜನಿಕರು ಸಹಕರಿಸುವಂತೆ ಅಧ್ಯಕ್ಷರು ಮನವಿ ಮಾಡಿದರು. 

ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ ಕೆ ಇದ್ದರು. ಪೌರಾಯುಕ್ತ ಮಧು ಎಸ್ ಮನೋಹರ್ ಸ್ವಾಗತಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.