ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪುತ್ತೂರು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಸೆ.3ರಂದು ಚುನಾವಣೆ

Published 23 ಆಗಸ್ಟ್ 2024, 15:42 IST
Last Updated 23 ಆಗಸ್ಟ್ 2024, 15:42 IST
ಅಕ್ಷರ ಗಾತ್ರ

ಪುತ್ತೂರು: ಇಲ್ಲಿನ ನಗರಸಭೆಯ ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆಯುವ ಚುನಾವಣೆಯ ದಿನ ನಿಗದಿಪಡಿಸಿ ಚುನಾವಣಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮೊಹಾಪಾತ್ರ ಆದೇಶ ಹೊರಡಿಸಿದ್ದಾರೆ.

ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ನಿಗದಿಪಡಿಸಲಾಗಿದೆ. ಸೆ.3ರಂದು ಚುನಾವಣಾ ಪ್ರಕ್ರಿಯೆ ನಡೆಯಲಿದ್ದು, ಅಂದು ಮಧ್ಯಾಹ್ನ 12.30ರಿಂದ 1.30ರ ವರೆಗೆ ನಾಮಪತ್ರ ಸಲ್ಲಿಸಬಹುದು. ಮಧ್ಯಾಹ್ನ 2.30ರಿಂದ 3 ಗಂಟೆಯವರೆಗೆ ನಾಮಪತ್ರ ಪರಿಶೀಲನೆ, ಕಣದಲ್ಲಿರುವ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು. ಬಳಿಕ ಚುನಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

21 ಸದಸ್ಯ ಸ್ಥಾನವನ್ನು ಹೊಂದಿರುವ ಪುತ್ತೂರು ನಗರ ಸಭೆಯಲ್ಲಿ 25 ಸದಸ್ಯ ಸ್ಥಾನವನ್ನು ಹೊಂದಿರುವ ಬಿಜೆಪಿಗೆ ಬಹುಮತವಿದೆ. ಕಾಂಗ್ರೆಸ್ 5 ಮತ್ತು ಎಸ್‌ಡಿಪಿಐ 1 ಸದಸ್ಯ ಬಲ ಹೊಂದಿದೆ. ಇದರೊಂದಿಗೆ ದ.ಕ. ಸಂಸದ, ಪುತ್ತೂರು ಶಾಸಕರಿಗೆ ಮತ ಚಲಾವಣೆಯ ಹಕ್ಕು ಇದೆ. ಬಿಜೆಪಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆಯುವ ಸಾಧ್ಯತೆ ಹೆಚ್ಚಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT