ಪುತ್ತೂರು: ಇಲ್ಲಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗೆ 7 ಮಂದಿ ಸೇರಿ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ಬುಧವಾರ ಪುತ್ತೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದ್ದು, ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ, ಬೆಳ್ತಂಗಡಿ ತಾಲ್ಲೂಕಿನ ಕುವೆಟ್ಟು ಗ್ರಾಮದ ಆದಿಲ್ ಹುಸೈನ್ (21) ಹಲ್ಲೆಗೊಳಗಾದವರು. ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

‘ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ಎಂಬುವರೊಂದಿಗೆ ಪುತ್ತೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದಾಗ ಪರಿಚಯಸ್ಥರಾದ ಬಿ.ಕೆ. ಮೊಯಿನುದ್ದೀನ್, ಮೋಹದ್ ಹಾಗೂ ಇತರ ಐವರು ಬಂದು ಹಲ್ಲೆ ನಡೆಸಿದ್ದಾರೆ. ಹಲ್ಲೆಯ ಬಗ್ಗೆ ಪ್ರಶ್ನಿಸಿದ ಸ್ನೇಹಿತರಿಗೂ ಬೆದರಿಕೆಯೊಡ್ಡಿದ್ದಾರೆ. ಸಾರ್ವಜನಿಕರು ಗಲಾಟೆ ಬಿಡಿಸಲು ಬಂದ ವೇಳೆ ಆರೋಪಿಗಳು ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿ ಸ್ಥಳದಿಂದ ತೆರಳಿದ್ದಾರೆ’ ಎಂದು ಆದಿಲ್ ಹುಸೈನ್ ದೂರಿನಲ್ಲಿ ಆರೋಪಿಸಿದ್ದಾರೆ.

‘ಕೆಲ ತಿಂಗಳ ಹಿಂದೆ ಮೊಯಿನುದ್ದೀನ್ ಹಾಗೂ ಇತತರರು ನಾನು ಕಲಿಯುತ್ತಿರುವ ಕಾಲೇಜಿನ ವಿದ್ಯಾರ್ಥಿಗಳಿಗೆ ಹಲ್ಲೆ ಮಾಡುತ್ತಿದ್ದಾಗ ನಾನು ಆ ಗಲಾಟೆ ತಡೆದಿದ್ದೆ. ಆ ದ್ವೇಷದಿಂದ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-29-676726404

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.