ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪುತ್ತೂರು ಕ್ಷೇತ್ರಕ್ಕೆ 8 ತಿಂಗಳಲ್ಲಿ ₹1,400 ಕೋಟಿ ಅನುದಾನ:ಶಾಸಕ ಅಶೋಕ್‌ಕುಮಾರ್

Published 5 ಮಾರ್ಚ್ 2024, 13:38 IST
Last Updated 5 ಮಾರ್ಚ್ 2024, 13:38 IST
ಅಕ್ಷರ ಗಾತ್ರ

ಪುತ್ತೂರು: ಪುತ್ತೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ಅಪಾರವಾದ ಅನುದಾನ ಬಂದಿದೆ. 8 ತಿಂಗಳ ಅವಧಿಯಲ್ಲಿ ಕ್ಷೇತ್ರಕ್ಕೆ ₹ 1,400 ಕೋಟಿ ಅನುದಾನ ಬಂದಿದೆ ಎಂದು ಶಾಸಕ ಅಶೋಕ್‌ಕುಮಾರ್ ರೈ ಹೇಳಿದರು.

ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಡೆ ನಡೆಯಲಿರುವ ₹ 1.57ಕೋಟಿಯ ವಿವಿಧ ಕಾಮಗಾರಿಗಳಿಗೆ ಮಂಗಳವಾರ ಅವರು ಸಂಪ್ಯದಲ್ಲಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಕ್ಷೇತ್ರದಾದ್ಯಂತ ನಿರಂತರವಾಗಿ ಅಭಿವೃದ್ಧಿ ಕಾರ್ಯ ಮಾಡಲಾಗುತ್ತಿದ್ದು, ಪಕ್ಷಾತೀತವಾಗಿ ಅಭಿವೃದ್ಧಿ ಕೆಲಸಗಳನ್ನು ನಡೆಯುತ್ತಿದೆ. ಮುಂದಿನ ಕೆಲವೇ ದಿನಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿರುವುದರಿಂದ ವಲಯ ಮಟ್ಟದ ಒಂದೇ ಕಡೆ ಆ ವ್ಯಾಪ್ತಿಯ ಎಲ್ಲ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಗುತ್ತಿದೆ. ಕಾಮಗಾರಿಗಳು ಸಮರ್ಪಕ ರೀತಿಯಲ್ಲಿ ಮತ್ತು ಉತ್ತಮ ಗುಣಮಟ್ಟದಲ್ಲಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ ಎಂದರು.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ಕಾಂಗ್ರೆಸ್ ಮುಖಂಡ ಬೂಡಿಯಾರ್ ಪುರುಷೋತ್ತಮ ರೈ ಮಾತನಾಡಿದರು.

ಆರ್ಯಾಪು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಉಪಾಧ್ಯಕ್ಷ ಅಶೋಕ್, ಸದಸ್ಯರಾದ ಯತೀಶ್ ದೇವಾ, ಪವಿತ್ರಾ ರೈ, ಪೂರ್ಣಿಮಾ ರೈ, ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ, ಬ್ಲಾಕ್ ಕಾಂಗ್ರೆಸ್ ಎಸ್‌ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್, ಆರ್ಯಾಪು ವಲಯ ಕಾಂಗ್ರೆಸ್ ಉಸ್ತುವಾರಿಗಳಾದ ಮಹಾಬಲ ರೈ ವಳತ್ತಡ್ಕ, ರಶೀದ್ ಸಂಪ್ಯ, ಕಾಂಗ್ರೆಸ್ ಮುಖಂಡ ಸಿದ್ದೀಕ್ ಸುಲ್ತಾನ್ ಭಾಗವಹಿಸಿದ್ದರು. ಆರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಜ್ವಲ್ ರೈ ತೊಟ್ಲ ಸ್ವಾಗತಿಸಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT