ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ಏ.17ರಂದು ರಾತ್ರಿ ನಡೆದ ಸುಡುಮದ್ದು (ಪುತ್ತೂರು ಬೆಡಿ) ಪ್ರದರ್ಶನದ ವೇಳೆ ಸುಡುಮದ್ದಿನ ಬೆಂಕಿ ತಾಗಿ ಗಾಯಗೊಂಡ ಯುವಕನೊಬ್ಬ ನೀಡಿದ ದೂರಿನಂತೆ ಸುಡುಮದ್ದು ಪ್ರದರ್ಶನ ಮಾಡಿದವರ ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ನಿವಾಸಿ ಸುಮಂತ್ ಶೆಟ್ಟಿ (20) ಅವರು ಸುಡುಮದ್ದಿನ ಬೆಂಕಿಯಿಂದ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆ.

ಪುತ್ತೂರಿನಲ್ಲಿ ನಡೆಯುತ್ತಿದ್ದ ಜಾತ್ರೆಗೆ ಸ್ನೇಹಿತರೊಂದಿಗೆ ಬಂದು ಜಾತ್ರೆಯ ಗದ್ದೆಯಲ್ಲಿ ಏರ್ಪಡಿಸಿದ್ದ ಸುಡುಮದ್ದು ಪ್ರದರ್ಶನವನ್ನು ಸ್ನೇಹಿತರೊಂದಿಗೆ ದೂರದಲ್ಲಿ ನಿಂತು ವೀಕ್ಷಿಸುತ್ತಿದ್ದ ವೇಳೆ ತನ್ನ ಹಾಗೂ ಭರತ್, ಕೌಶಿಕ್, ಸೌಮ್ಯ, ದೀಪಕ್, ಯಶವಂತ್ , ಮೋಹನ್ ಮೇಲೆ ಬೆಂಕಿ ಬಿದ್ದಿದೆ. ಸುಡುಮದ್ದು ನಿರ್ವಹಣೆ ಮಾಡುವವರು ಹಾಗೂ ದೇವಸ್ಥಾನದ ವ್ಯವಸ್ಥಾನ ಸಮಿತಿ ಪದಾಧಿಕಾರಿಗಳು ಸುಡುಮದ್ದು ಪ್ರದರ್ಶನದ ವೇಳೆ ಅಗತ್ಯ ಮುಂಜಾಗ್ರತೆ ವ್ಯವಸ್ಥೆ ಮಾಡಿಕೊಳ್ಳದೇ ನಿರ್ಲಕ್ಷ್ಯ ವಹಿಸಿರುವುದು ಈ ಘಟನೆಗೆ ಕಾರಣವಾಗಿದೆ ಎಂದು ಸುಮಂತ್ ಶೆಟ್ಟಿ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಸುಮಂತ್ ಅವರು ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-29-914039644

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.