ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತೂರು: ಗ್ರಾಮ ಪಂಚಾಯಿತಿ ಉಪಚುನಾವಣೆಗೆ 11 ನಾಮಪತ್ರ

Published 12 ಜುಲೈ 2023, 13:58 IST
Last Updated 12 ಜುಲೈ 2023, 13:58 IST
ಅಕ್ಷರ ಗಾತ್ರ

ಪುತ್ತೂರು: ತಾಲ್ಲೂಕಿನ ಆರ್ಯಾಪು ಮತ್ತು ನಿಡ್ಪಳ್ಳಿ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿರುವ ತಲಾ ಒಂದೊಂದು ಸ್ಥಾನಗಳಿಗೆ ಇದೇ 23ರಂದು ನಡೆಯುವ ಉಪ ಚುನಾವಣೆಗೆ ಬುಧವಾರ 5 ನಾಮಪತ್ರಗಳು ಸಲ್ಲಿಕೆಯಾಗಿವೆ. ಆರ್ಯಾಪುವಿನಲ್ಲಿ 5 ಮತ್ತು ನಿಡ್ಪಳ್ಳಿಯಲ್ಲಿ 6 ಸೇರಿದಂತೆ ಸಲ್ಲಿಕೆಯಾದ ಒಟ್ಟು ನಾಮಪತ್ರಗಳ ಸಂಖ್ಯೆ 11 ಆಗಿದ್ದು ಪರಿಶೀಲನೆ ಗುರುವಾರ ನಡೆಯಲಿದೆ.

ಹಿಂದುಳಿದ ವರ್ಗ ಎಗೆ ಮೀಸಲಾಗಿರುವ ಆರ್ಯಾಪು ಎರಡನೇ (11) ವಾರ್ಡ್‌ನ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಜಗದೀಶ್ ಭಂಡಾರಿ ಗೆಣಸಿನಕುಮೇರು ಮತ್ತು ಒಂದನೇ ವಾರ್ಡ್‌ ಸದಸ್ಯ ವಸಂತ ಶ್ರೀದುರ್ಗಾ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಪುರುಷೋತ್ತಮ ಪ್ರಭು ದೇವಸ್ಯ ಅಬ್ಬುಗದ್ದೆ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ನಿಡ್ಪಳ್ಳಿ ಗ್ರಾಮ ಪಂಚಾಯಿತಿಯ ಸಾಮಾನ್ಯ ವರ್ಗಕ್ಕೆ ಮೀಸಲಿರುವ ಒಂದನೇ ವಾರ್ಡ್‌ಗೆ ಕುಮಾರ ನರಸಿಂಹ ಭಟ್ ಮತ್ತು ಕೆ.ನಾರಾಯಣ ಪಾಟಾಳಿ ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಜೊತೆ ಮಾಜಿ ಶಾಸಕ ಸಂಜೀವ ಮಠಂದೂರು, ಕರಾವಳಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಶಾಂತಿವನ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ, ಬಿಜೆಪಿ ಹಿಂದುಳಿದ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ನಾರಾಯಣ, ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಜೀವಂಧರ್ ಜೈನ್, ಆರ್ಯಾಪು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷೆ ಪೂರ್ಣಿಮಾ ರೈ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ್ ರಾವ್, ಬಿಜೆಪಿ ಮುಖಂಡರಾದ ಗೋಪಾಲಕೃಷ್ಣ ಹೇರಳೆ, ಅಪ್ಪಯ್ಯ ಮಣಿಯಾಣಿ, ರಾಜೇಶ್ ಬನ್ನೂರು, ಜಯಶ್ರೀ ಶೆಟ್ಟಿ, ಯುವರಾಜ್ ಪೆರಿಯತ್ತೋಡಿ, ಅರುಣ್ ವಿಟ್ಲ, ಜಯಂತ ಶೆಟ್ಟಿ ಕಂಬಳದಡ್ಡ, ಹರಿಪ್ರಸಾದ್ ಯಾದವ್, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ ರೈ, ಯತೀಶ್ ದೇವ, ಪವಿತ್ರಾ ರೈ, ಹರೀಶ್ ನಾಯಕ್ ವಾಗ್ಲೆ, ರತ್ನಾವತಿ, ಗೀತಾ ಇದ್ದರು.

ಆರ್ಯಾಪು ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿಯ ಸಂಯೋಜಕ ಕೃಷ್ಣಪ್ರಸಾದ್ ಆಳ್ವ, ಆರ್ಯಾಪು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸದಾನಂದ ಶೆಟ್ಟಿ ಕೂರೇಲು, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮಹಾಬಲ ರೈ ವಳತ್ತಡ್ಕ, ಯಂಗ್ ಬ್ರಿಗೇಡ್ ಜಿಲ್ಲಾ ಘಟಕದ ಅಧ್ಯಕ್ಷ ರಂಜಿತ್ ಬಂಗೇರ, ನಗರಸಭಾ ಸದಸ್ಯ ಮಹಮ್ಮದ್ ರಿಝಾಜ್ ಪರ್ಲಡ್ಕ, ಕಾಂಗ್ರೆಸ್ ಮುಖಂಡರಾದ ಶಿವರಾಮ ಆಳ್ವ, ಚೆನ್ನಪ್ಪ ಗೌಡ ಇದ್ದರು.

ಆರ್ಯಾಪು ಎರಡನೇ ವಾರ್ಡ್‌ಗೆ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ನಿಡ್ಪಳ್ಳಿ ಗ್ರಾಮ ಪಂಚಾಯಿತಿಯ ನಿಡ್ಪಳ್ಳಿ ಒಂದನೇ ವಾರ್ಡ್‌ಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಶೇಖರ್ ಪ್ರಭು ಗೋಳಿತ್ತಡಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸತೀಶ್ ಶೆಟ್ಟಿ ಬಾಕೆತ್ತಿಮಾರ್ ಮತ್ತು ಹರೀಶ್ಪೂಜಾರಿ ಹೊಸಮನೆ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಸೋಮವಾರ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಜಗನ್ನಾಥ್ ರೈ ಕೊಳಂಬೆತ್ತಿಮಾರ್ ನಾಮಪತ್ರ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT