ಪುತ್ತೂರು: ಗೇರು ಬೀಜ ಸಾಗಣೆ ಕಂಟೈನರ್ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಪುತ್ತೂರು ತಾಲ್ಲೂಕಿನ ಮಾಡ್ನೂರು ಗ್ರಾಮದ ಕಾವು ಬುಶ್ರಾ ವಿದ್ಯಾಸಂಸ್ಥೆಯ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಮತ್ತು ಕ್ಲೀನಿರ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪುತ್ತೂರು ಕಡೆಯಿಂದ ಮೈಸೂರು ಕಡೆಗೆ ಗೇರು ಬೀಜದ ಮೂಟೆಗಳನ್ನು ಒಯ್ಯುತ್ತಿದ್ದ ಲಾರಿಯು ಪಿಕಪ್ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸುವ ಯತ್ನದಲ್ಲಿ ಚಾಲಕನ ಹತೋಟಿ ಕಳೆದುಕೊಂಡು ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಲಾರಿ ಪಲ್ಟಿಯಾದ ಪರಿಣಾಮ ಗೇರು ಬೀಜದ ಮೂಟೆಗಳು ಹೆದ್ದಾರಿ ಪಕ್ಕದ ಚರಂಡಿಗೆ ಬಿದ್ದಿವೆ.ವಿದ್ಯುತ್ ಕಂಬಕ್ಕೆ ಹಾನಿ ಹಿನ್ನಲೆಯಲ್ಲಿ ಕಾವು ಮತ್ತು ಈಶ್ವರಮಂಗಲ ಸುತ್ತಮುತ್ತಲಿನ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ತನಕ ವಿದ್ಯುತ್ ಸರಬರಾಜು ಸ್ಥಗಿತಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.