ಪುತ್ತೂರು: ಇಲ್ಲಿನ ಮಹಾಲಿಂಗೇಶ್ವರ ದೇವಳದಲ್ಲಿ ಶುಕ್ರವಾರ ಧ್ವಜಾರೋಹಣದೊಂದಿಗೆ ಆರಂಭವಾದ ವರ್ಷಾವಧಿ ಜಾತ್ರೋತ್ಸವ ಏ.20ರವರೆಗೆ ನಡೆಯಲಿದೆ.

ಶುಕ್ರವಾರ ಬೆಳಿಗ್ಗೆ 9.20ರ ನಂತರದ ವೃಷಭ ಲಗ್ನ ಸುಮುಹೂರ್ತದಲ್ಲಿ ದೇವಳದ ತಂತ್ರಿ ಕುಂಟಾರು ರವೀಶ್ ತಂತ್ರಿ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಿತು.

ಶಾಸಕ ಅಶೋಕ್ಕುಮಾರ್ ರೈ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕ ವಸಂತಕುಮಾರ್ ಕೆದಿಲಾಯ, ಬಿ.ಈಶ್ವರ ಬೇಡೇಕರ್, ಕೃಷ್ಣವೇಣಿ, ನಳಿನಿ ಪಿ.ಶೆಟ್ಟಿ, ದಿನೇಶ್ ಕುಲಾಲ್ ಪಿ.ವಿ., ಮಹಾಬಲ ರೈ ಒಳತ್ತಡ್ಕ, ಸುಭಾಶ್ ರೈ ಬೆಳ್ಳಿಪ್ಪಾಡಿ, ವಿನಯಕುಮಾರ್ ಸುವರ್ಣ, ದೇವಳದ ಮ್ಯಾನೇಜರ್ ಹರೀಶ್ ಶೆಟ್ಟಿ ಪಾಲ್ಗೊಂಡಿದ್ದರು.

ವರ್ಷಾವಧಿ ಜಾತ್ರೋತ್ಸವ ಹತ್ತು ದಿನ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಏ.10ರಿಂದ ಆರಂಭಗೊಂಡು 17ರವರೆಗೆ ಪುತ್ತೂರು ನಗರ ವ್ಯಾಪ್ತಿಯ ವಿವಿಧ ಕಡೆಗಳಿಗೆ ದೇವರ ಪೇಟೆ ಸವಾರಿ ನಡೆಯಲಿದೆ. 17ರಂದು ನಡೆಯುವ ‘ಪುತ್ತೂರು ಬೆಡಿ’ ಸಿಡಿಮದ್ದು ಪ್ರದರ್ಶನ ಮತ್ತು ಬ್ರಹ್ಮರಥೋತ್ಸವ ಜಾತ್ರೆಯ ಪ್ರಮುಖ ಆಕರ್ಷಣೆಯಾಗಿದೆ. 18ರಂದು ಸಂಜೆ ವೀರಮಂಗಲಕ್ಕೆ ದೇವರ ಅವಭೃತ ಸ್ನಾನ ಸವಾರಿ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ದೇವಳಕ್ಕೆ ದೀಪಾಲಂಕಾರ ಮಾಡಲಾಗಿದ್ದು, ಪುತ್ತೂರು ನಗರ ತಳಿರು ತೋರಣ, ವಿದ್ಯುತ್ ದೀಪಾಲಂಕಾರದೊಂದಿಗೆ ಕಂಗೊಳಿಸುತ್ತಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-29-1119804201

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.