ಪುತ್ತೂರು: ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಪ್ಯದಲ್ಲಿ ಫೈನಾನ್ಸ್ ಉದ್ಯಮಿ ಚರಣ್ರಾಜ್ ರೈ ಎಂಬುವರ ಮೇಲೆ 2018ರಲ್ಲಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ ಪ್ರಕರಣದ ಎಲ್ಲ ಆರು ಮಂದಿ ಆರೋಪಿಗಳನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ದೋಷಮುಕ್ತಗೊಳಿಸಿದೆ.

ಪ್ರಕರಣದಲ್ಲಿ ಆರೋಪಿಯಾಗಿದ್ದ ಕಾರ್ತಿಕ್ ಸುವರ್ಣ ಅವರನ್ನು ಸಂಪ್ಯದಲ್ಲಿ ನಡೆದಿದ್ದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ವೇಳೆ ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು. ಕಾರ್ತಿಕ್ ಸುವರ್ಣ ಅವರ ಕೊಲೆಯ ಬಳಿಕದ ವಿದ್ಯಮಾನದಲ್ಲಿ ಸೇಡಿನ ಪ್ರತೀಕಾರವಾಗಿ ಚರಣ್ರಾಜ್ ರೈ ಅವರನ್ನೂ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿತ್ತು.

ಚರಣ್ ರಾಜ್ ರೈ ಅವರು 2018ರ ಜ.8ರಂದು ರಾತ್ರಿ ಪುತ್ತೂರಿನಿಂದ ಕಾರಿನಲ್ಲಿ ಬಂದಿಳಿದು ಮನೆಗೆ ನಡೆದು ಕೊಂಡು ಹೋಗುತ್ತಿದ್ದ ವೇಳೆ ಪರಿಚಯ ಸ್ಥರಾದ ಕಿಶೋರ್ ಪೂಜಾರಿ, ಪ್ರೀತಂ ಶೆಟ್ಟಿ, ಧನಂಜಯ ಶೆಟ್ಟಿ, ಮನೀಶ್ ಕುಮಾರ್, ಸುಜಿತ್, ರಾಕೇಶ್, ಕಾರ್ತಿಕ್ ಸುವರ್ಣ ಮತ್ತಿತರರು ಚರಣ್ ರಾಜ್ ರೈ ಅವರನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿ, ತುಳಿದು ಕೊಲೆಗೆ ಯತ್ನಿಸಿದ್ದರು. ಚರಣ್ ರಾಜ್ ಅವರು ನೀಡಿದ್ದ ದೂರಿನಂತೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ತನಿಖೆ ನಡೆಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದ ಮಧ್ಯೆ ಆರೋಪಿಗಳ ಪೈಕಿ ಕಾರ್ತಿಕ್ ಸುವರ್ಣ ಅವರ ಕೊಲೆ ನಡೆದಿತ್ತು. ವಿಚಾರಣೆ ಪೂರ್ಣಗೊಳಿಸಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾ ಲಯದ ನ್ಯಾಯಾಧೀಶೆ ಸರಿತಾ ಡಿ. ಅವರು ಆರೋಪಿಗಳನ್ನು ದೋಷಮುಕ್ತಗೊಳಿಸಿದ್ದಾರೆ. ಆರೋಪಿಗಳ ಪರವಾಗಿ ವಕೀಲ ಮಹೇಶ್ ಕಜೆ ವಾದಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-29-731910965

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.