ಪುತ್ತೂರು: ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ನೆಲ್ಲಿತ್ತಡ್ಕ ಪ್ರದೇಶಕ್ಕೆ ಕೆಲ ತಿಂಗಳುಗಳಿಂದ ಕುಡಿಯುವ ನೀರಿನ ಪೂರೈಕೆ ಇಲ್ಲದೆ ಜನರಿಗೆ ಸಮಸ್ಯೆ ಎದುರಾಗಿದೆ.

ಗ್ರಾಮ ಪಂಚಾಯಿತಿಗೆ ತಿಳಿಸಿ ಸಮಸ್ಯೆ ಬಗೆಹರಿಸುವಂತೆ ವಿನಂತಿಸಿದ್ದರೂ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿರುವ ಸಾರ್ವಜನಿಕರು, ಸಮಸ್ಯೆ ಶೀಘ್ರ ಬಗೆಹರಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ನೆಲ್ಲಿತ್ತಡ್ಕ ಪ್ರದೇಶದ ಸುಮಾರು 15 ಮನೆಗಳಿಗೆ ಕೆಲವು ತಿಂಗಳುಗಳಿಂದ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಜಲಜೀವನ್ ಮಿಷನ್ ಯೋಜನೆಯಡಿ ನೀರಿನ ಪೈಪ್ಲೈನ್ ಅಳವಡಿಕೆಗಾಗಿ ಜೆಸಿಬಿ ಯಂತ್ರದ ಮೂಲಕ ಕೆಲಸ ಮಾಡಲಾಗಿದ್ದು, ಅದರಿಂದ ಪೈಪ್ಗಳು ಒಡೆದು ಹೋಗಿವೆ. ಇದರಿಂದಾಗಿ ಜನರು ಪರದಾಡುವಂತಾಗಿದೆ. ಇನ್ನೊಬ್ಬರನ್ನು ಆಶ್ರಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-29-62162601

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.