ಶುಕ್ರವಾರ, ಫೆಬ್ರವರಿ 3, 2023
23 °C
ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ

ಹೆಸರು ಉಳಿಸುವ ಕಾರ್ಯ ಹೆಚ್ಚಲಿ: ಧರ್ಮಪಾಲನಾಥ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪುತ್ತೂರು: ಜೀವನದ ಪ್ರತಿಯೊಂದು ಹಂತದಲ್ಲೂ ಸಂಸಾರ, ಸಮಾಜ ಸೇವೆ, ಕೃಷಿ, ದೇವಸ್ಥಾನಕ್ಕೆಂದು ಒಂದಿಷ್ಟು ಸಮಯದ ಅಜೆಂಡಾವನ್ನು ಗುರುತಿಸಿಕೊಂಡು, ತನ್ಮೂಲಕ ಸೇವೆ ಮಾಡಿದಾಗ ಮನುಷ್ಯನ ಜೀವನ ಸಾರ್ಥಕವಾಗುತ್ತದೆ. ಉಸಿರು ಹೋದ ಬಳಿಕವೂ ಹೆಸರು ಉಳಿಸುವ ಕಾರ್ಯ ಮಾಡಬೇಕು ಎಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಭಾನುವಾರ ನಗರದ ತೆಂಕಿಲ ಒಕ್ಕಲಿಗ ನಗರದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆದ ವಾರ್ಷಿಕ ಸಮಾವೇಶ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಭಾ ಕಾರ್ಯಕ್ರಮದಲ್ಲಿ ಅವರು ಅಶೀರ್ವಚನ ನೀಡಿದರು.

ಬಾಲಗಂಗಾಧರನಾಥ ಸ್ವಾಮೀಜಿ ಅವರ 78ನೇ ಜಿಲ್ಲಾ ಮಟ್ಟದ ಜಯಂತ್ಯೋತ್ಸವ ಕಾರ್ಯಕ್ರಮ ಪುತ್ತೂರಿನಲ್ಲಿ ಜ.28ಕ್ಕೆ ವಿಜೃಂಭಣೆಯಿಂದ ನಡೆಯಲಿದೆ ಎಂದರು.

ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಮೋಹನ್ ಗೌಡ ಇಡ್ಯಡ್ಕ ಅಧ್ಯಕ್ಷತೆ ವಹಿಸಿದ್ದರು. ಒಕ್ಕಲಿಗ ಗೌಡ ಸೇವಾ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ, ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ ಮಾತನಾಡಿದರು. ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷೆ ಮೀನಾಕ್ಷಿ ಡಿ. ಗೌಡ, ಪ್ರಧಾನ ಕಾರ್ಯದರ್ಶಿ ವಾರಿಜ ಬೆಳ್ಯಪ್ಪ ಗೌಡ, ಒಕ್ಕಲಿಗ ಗೌಡ ಸೇವಾ ಸಂಘದ ಮಾಜಿ ಅಧ್ಯಕ್ಷ. ಎಚ್.ಡಿ. ಶಿವರಾಮ್, ಸಮಾವೇಶದ ಸಂಚಾಲಕ ಪುರುಷೋತ್ತಮ ಮುಂಗ್ಲಿಮನೆ, ರವಿ ಮುಂಗ್ಲಿಮನೆ, ಯುವ ಗೌಡ ಸಂಘದ ಪ್ರಧಾನ ಕಾರ್ಯದರ್ಶಿ ವಿನಯ ಪ್ರಸಾದ್ ಇದ್ದರು.

ಒಕ್ಕಲಿಗ ಗೌಡ ಸೇವಾ ಸಂಘದ ತಾಲೂಕು ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಸುಂದರ ಗೌಡ ನಡುಬೈಲು ವಂದಿಸಿದರು. ಉದಯ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಲಾಂಛನ ಬಿಡುಗಡೆ: ಡಿ.25ರಂದು ಪುತ್ತೂರು ವಲಯದ ಆತಿಥ್ಯದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಯುವ ಗೌಡ ಸಂಘದ ಕ್ರೀಡೋತ್ಸವದ ಯುವ ಕ್ರೀಡಾ ಸಂಭ್ರಮದ ಆಮಂತ್ರಣ ಪತ್ರ, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್‌ ವತಿಯಿಂದ ಆರಂಂಭಗೊಂಡಿರುವ ಒಕ್ಕಲಿಗ ವಿವಾಹ ವೇದಿಕೆಯ ಲಾಂಛನ ಹಾಗೂ ಒಕ್ಕಲಿಗ ಗೌಡ ಸಮುದಾಯದ ಸಂಸ್ಕೃತಿ ಆಚಾರ ವಿಚಾರಗಳನ್ನೊಳಗೊಂಡ ‘ಒಕ್ಕೊರಲು’ ಇದರ 2ನೇ ಆವೃತ್ತಿಯ ಬಿಡುಗಡೆಯನ್ನು ಸ್ವಾಮೀಜಿ ನೆರವೇರಿಸಿದರು.
 
ಗೌರವಾರ್ಪಣೆ- ಸನ್ಮಾನ: ಧರ್ಮಪಾಲನಾಥ ಸ್ವಾಮೀಜಿಯ ಅವರನ್ನು ಒಕ್ಕಲಿಗ ಗೌಡ ಸಂಘದಿಂದ ಗೌರವಿಸಲಾಯಿತು. ಇಂಡಿಯ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದ ರಾಶಿ ಕೆ.ಎಸ್ ಅವರನ್ನು ಸನ್ಮಾನಿಸಲಾಯಿತು. ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಸಮಿತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಕಿರಣ್ ಬುಡ್ಲೆಗುತ್ತು ಹಾಗೂ ಸಮಿತಿಯಲ್ಲಿ ಸಹಕಾರ ನೀಡಿದ ಶಿವರಾಮ್, ಪುರುಷೋತ್ತಮ, ಮಹೇಶ್ ಅವರನ್ನು ಗೌರವಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು