ಪುತ್ತೂರು: ಒಳಮೊಗ್ರು ಗ್ರಾಮದ ಕುಟ್ಟಿನೋಪ್ಪಿನಡ್ಕ ಸಮೀಪದ ಮುರುವದಿಂದ ಕಲ್ಲಡ್ಕ ಮೂಲಕವಾಗಿ ದರ್ಬೆತ್ತಡ್ಕಕ್ಕೆ ಹೋಗುವ ರಸ್ತೆಯಲ್ಲಿ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಬುಧವಾರ ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ‘ಚುನಾವಣೆ ಸಂದರ್ಭ ಕ್ಷೇತ್ರದಾದ್ಯಂತ ಸಂಚಾರ ಮಾಡಿದ್ದೆ. ಆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ಇಲ್ಲಿನ ಸೇತುವೆ ನಿರ್ಮಾಣಕ್ಕೆ ₹2 ಕೋಟಿ ಅನುದಾನ ಒದಗಿಸಿದ್ದೇನೆ. ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಒಳ್ಳೆಯ ಕೆಲಸ ಮಾಡುತ್ತಿದ್ದೇನೆ ಎಂದು ನಿಮಗೆ ಅನಿಸಿದರೆ ಮಾತ್ರ ಮುಂದಿನ ಚುನಾವಣೆಯಲ್ಲಿ ಮತ ನೀಡಿ’ ಎಂದರು.

ವಕೀಲ ಕುಂಬ್ರ ದುರ್ಗಾಪ್ರಸಾದ್ ರೈ ಮಾತನಾಡಿ, ಹಿಂದೆ ವಿನಯ ಕುಮಾರ್ ಸೊರಕೆ ಅವರ ಆಡಳಿತಾವಧಿಯಲ್ಲಿ ಇಲ್ಲಿ ಕಿರಿದಾದ ಸೇತುವೆ ನಿರ್ಮಾಣವಾಗಿತ್ತು. ಅವರ ಬಳಿಕ ಬಂದ ಯಾವ ಶಾಸಕರೂ ಇಲ್ಲಿನ ಜನರ ಸಮಸ್ಯೆ ಆಲಿಸಿಲ್ಲ. ಇಂದು ಅದೇ ಸೇತುವೆಗೆ ಶಾಸಕ ಅಶೋಕ್ ರೈ ಅವರು ಅನುದಾನ ಒದಗಿಸಿ ಜನರ 40 ವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದಾರೆ. ಕಾಂಗ್ರೆಸ್ ಅಭಿವೃದ್ಧಿಯ ಪರ ಎಂಬುವುದನ್ನು ಸಾಬೀತುಪಡಿಸಿದ್ದಾರೆ ಎಂದು ಹೇಳಿದರು.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರಿ ಬೊಳ್ಳಾಡಿ, ಗ್ರಾಮ ಪಂಚಾಯಿತಿ ನಿಕಟಪೂರ್ವ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ವಿನೋದ್ ಶೆಟ್ಟಿ ಮುಡಾಲ, ಯುವ ಕಾಂಗ್ರೆಸ್ ಮುಖಂಡ ರಕ್ಷಿತ್ ರೈ ಮುಗೇರು, ಪಕ್ಷದ ಪ್ರಮುಖರಾದ ಅಝೀಝ್ ನೀರ್ಪಾಡಿ, ಗೋವಿಂದ ನಾಯ್ಕ, ಹಂಝ ಉಜಿರೋಡಿ, ಸಂಕಪ್ಪ ಆಳ್ವ, ಸುಧಾಕರ ಆಳ್ವ, ತ್ಯಾಂಪಣ್ಣ ಆಳ್ವ, ವಸಂತ ಶೆಟ್ಟಿ, ಹಾರಿಸ್ ಮುಳಿಯಡ್ಕ, ರಮೇಶ್ ಆಳ್ವ ಕಲ್ಲಡ್ಕ, ಸುಧಾಕರ ಆಳ್ವ ಕಲ್ಲಡ್ಕ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-29-1685832805

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.