ಪುತ್ತೂರು: ಇಲ್ಲಿನ ನಿವಾಸಿ ಯಶೋಧರ ಎಂಬುವವರ ಕ್ರೆಡಿಟ್ ಕಾರ್ಡ್ ಸಮಖ್ಯೆ ಹಾಗೂ ಒಟಿಪಿ ಪಡೆದು ಆನ್ಲೈನ್ನಲ್ಲಿ ವಂಚನೆ ನಡೆಸಿದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಮಹಾರಾಷ್ಟದ ಅವಿನಾಶ್ ರಮೇಶ್ ಗೌಡ (24) ಬಂಧಿತ ಆರೋಪಿ. ಆತ ಮಂಡ್ಯ ಕೃಷ್ಣರಾಜ ಪೇಟೆಯಲ್ಲಿ ವಾಸಿಸುತ್ತಿದ್ದ. ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲಿಸರು ತಿಳಿಸಿದ್ದಾರೆ.

ಯಶೋಧರ ಅವರಿಗೆ ವಿವಿಧ ಮೊಬೈಲ್ ನಂಬರ್ಗಳಿಂದ ಕರೆ ಮಾಡಿದ್ದ ಆರೋಪಿಯು ತಾನು ವಿಮೆ ಕಂಪನಿಯೊಂದರಿಂದ ಮಾತನಾಡುತ್ತಿರುವುದಾಗಿ ತಿಳಿಸಿದ್ದ. ವಿಮೆ ಮಾಡಿಸಿಕೊಡುವುದಾಗಿ ಹೇಳಿ ಆತ ಹಣ ಪಾವತಿಸುವಂತೆ ತಿಳಿಸಿದ್ದ. ಇದಕ್ಕೆ ಯಶೋಧರ ಅವರು ನಿರಾಕರಿಸಿದ್ದರು. ಬಳಿಕ ಆರೋಪಿಯು ವಿಮೆಯನ್ನು ರದ್ದು ಮಾಡುವುದಾಗಿ ತಿಳಿಸಿ, ಯಶೋಧರ ಅವರ ಕ್ರೆಡಿಟ್ ಕಾರ್ಡ್ ಸಂಖ್ಯೆ ಮತ್ತು ಒಟಿಪಿ ಪಡೆದುಕೊಂಡಿದ್ದ. ಅವರ ಬ್ಯಾಂಕ್ ಖಾತೆಯಿಂದ ₹ 2.37 ಲಕ್ಷ ಬೇರೆ ಬ್ಯಾಂಕ್ ಖಾತೆಗೆ ವರ್ಗಾವಣೆಗೊಂಡಿತ್ತು. ಈ ಬಗ್ಗೆ ಅವರು ದೂರು ನೀಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.