ಪುತ್ತೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಸುತ್ತೋಲೆಯಂತೆ ಪೆಟ್ರೋಲ್ ಬಂಕ್ನಲ್ಲಿ ಕೃಷಿಕರಿಗೆ ಬಾಟಲಿ ಹಾಗೂ ಕ್ಯಾನ್ಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ನೀಡಲು ನಿರಾಕರಿಸುತ್ತಿದ್ದು, ರೈತರು ತೊಂದರೆಗೀಡಾಗಿದ್ದಾರೆ. ಸರ್ಕಾರ ತಕ್ಷಣ ಈ ಸುತ್ತೋಲೆಯನ್ನು ಹಿಂಪಡೆಯದಿದ್ದರೆ ರೈತರು ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ಮುಖಂಡ ಸಂಜೀವ ಮಠಂದೂರು ಎಚ್ಚರಿಸಿದರು.

ಪುತ್ತೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆಯುಕ್ತರು ಈ ರೀತಿಯ ಆದೇಶ ಹೊರಡಿಸಿದ್ದಾರೆ. ಇದು ಖಂಡನೀಯ. ಗ್ರಾಮೀಣ ಪ್ರದೇಶದಲ್ಲಿ ರೈತರು ಯಾಂತ್ರಿಕೃತ ಕೃಷಿ ಮಾಡುತ್ತಿದ್ದು, ಯಂತ್ರಗಳನ್ನು ಅವಲಂಭಿಸಿಕೊಂಡು ಕೃಷಿ ಕಾರ್ಯವನ್ನು ಮಾಡುತ್ತಿರುವಾಗ ಇಂಧನದ ಬಳಕೆ ಅನಿವಾರ್ಯವಾಗಿದೆ. ಹೊಲ ಉಳುವ ಟ್ರಾಕ್ಟರ್, ಪವರ್ ಟಿಲ್ಲರ್, ನೀರೆತ್ತುವ ಪಂಪ್ ಸೆಟ್ ಹಾಗೂ ಹುಲ್ಲು ಸವರುವ ಯಂತ್ರ, ಕಟ್ಟಿಗೆ ತುಂಡುಮಾಡುವ ಯಂತ್ರಗಳಿಗೆ ಇಂಧನವನ್ನು ಬಾಟಲಿ ಹಾಗೂ ಕ್ಯಾನ್ಗಳಲ್ಲಿ ಕೊಂಡು ಹೋಗುವುದು ಅನಿವಾರ್ಯವಾಗಿದೆ. ಆದರೆ, ಸರ್ಕಾರದ ಸುತ್ತೋಲೆಯಂತೆ ಪೆಟ್ರೋಲ್ ಬಂಕ್ನಲ್ಲಿ ಕೃಷಿಕರಿಗೆ ಬಾಟಲಿ ಹಾಗೂ ಕ್ಯಾನ್ಗಳಲ್ಲಿ ಪೆಟ್ರೋಲ್–ಡೀಸೆಲ್ ಕೊಡಲು ನಿರಾಕರಿಸುತ್ತಿರುವುದರಿಂದ ಸಮಸ್ಯೆಯಾಗಿದೆ ಎಂದರು.

ಸರ್ಕಾರ ಈ ಸುತ್ತೋಲೆಯನ್ನು ವಾಪಾಸ್ ಪಡೆದು ಕೃಷಿಕರಿಗೆ ಅನುಕೂಲ ಮಾಡಬೇಕು. ಇಲ್ಲದೆ ಇದ್ದರೆ ಕೃಷಿಕರು ಬೀದಿಗೆ ಇಳಿದು ಹೋರಾಟ ಮಾಡುವುದು ಅನಿವಾರ್ಯವಾಗಬಹುದು ಎಂದು ಅವರು ಎಚ್ಚರಿಸಿದರು.

ದ.ಕ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ವಿಜಯ ಕುಮಾರ್ ರೈ ಕೋರಂಗ, ಭಾರತೀಯ ಕಿಸಾನ್ ಸಂಘದ ಪ್ರಾಂತ ಕಾರ್ಯದರ್ಶಿ ರಾಮ್ಪ್ರಸಾದ್, ಸೇವಾ ಭಾರತಿಯ ಧನಂಜಯ ಬೆದ್ರೋಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-51-1254726749

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.