ಪುತ್ತೂರು: ತನ್ನೂರಿನ ಅಪ್ರಾಪ್ತ ಬಾಲಕಿಯನ್ನು ಸುಳ್ಯ ತಾಲ್ಲೂಕಿನ ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಎಂಬಲ್ಲಿಗೆ ಕರೆದುಕೊಂಡು ಬಂದು ಲೈಂಗಿಕ ಕಿರುಕುಳ ನೀಡಿದ್ದ ಪೊಕ್ಸೊ ಪ್ರಕರಣದ ಆರೋಪಿ, ಜಾರ್ಖಂಡ್ ಮೂಲದ ರೇಮುಂಡ ಎಂಬುವನಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

ರೇಮುಂಡ ತನ್ನ ಊರಿನ ಬಾಲಕಿಯನ್ನು ಪಾಲೆಪ್ಪಾಡಿಗೆ ಕರೆದುಕೊಂಡು ಹೋಗಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಈ ವಿಚಾರ ಬಹಿರಂಗಗೊಂಡ ಬಳಿಕ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆತನನ್ನು ಕಳೆದ ಫೆ. 13ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ರೇಮುಂಡ ಪುತ್ತೂರಿನ ವಕೀಲ ಮಹೇಶ್ ಕಜೆ ಅವರ ಮೂಲಕ ಪುತ್ತೂರಿನ 5ದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ವಾದ– ವಿವಾದ ಆಲಿಸಿದ ನ್ಯಾಯಾಧೀಶೆ ಸರಿತಾ ಡಿ. ಅವರು ಮೇ 19ರಂದು ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-29-1666604770

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.