ಪುತ್ತೂರು: ತಾಲ್ಲೂಕಿನ ಗ್ರಾಮೀಣ ಮತ್ತು ನಗರ ಭಾಗದಲ್ಲಿ ಕಳೆದ 15 ದಿನಗಳಿಂದ ನಿರಂತರವಾಗಿ ವಿದ್ಯುತ್ ಕಡಿತವಾಗುತ್ತಿದ್ದು, ತಕ್ಷಣ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಮುಖಂಡ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬನ್ನೂರು ಮೆಸ್ಕಾಂ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಮುಖಂಡ ಸಂಜೀವ ಮಠಂದೂರು ಮಾತನಾಡಿ, ಮಳೆಗಾಲ ಆರಂಭವಾಗುವ ಮೊದಲೇ ಪುತ್ತೂರು ತಾಲ್ಲೂಕಿನ ಬಹುತೇಕ ಕಡೆ ವಿದ್ಯುತ್ ವಾರಗಟ್ಟಲೆ ಕಡಿತವಾಗಿ ಜನ ಸಾಮಾನ್ಯರು ಕುಡಿಯುವ ನೀರಿಗೆ ಬವಣೆ ಪಡುವಂತಾಗಿದೆ. ಈ ಬಾರಿ ಗಾಳಿ, ಮಳೆ, ಸಿಡಿಲು ಇಲ್ಲದಿದ್ದರೂ ವಿದ್ಯುತ್ ಕಡಿತವಾಗುತ್ತಿದೆ. ಉಪ್ಪಿನಂಗಡಿ, ಕಬಕದಲ್ಲಿ ವಿದ್ಯುತ್ ಕಡಿತದಿಂದ ಜನ ಸಮಸ್ಯೆ ಅನುಭವಿಸುತ್ತಿದ್ದಾರೆ. ಪುತ್ತೂರಿನಲ್ಲಿ ಪವರ್ಮನ್ಗಳ ವರ್ಗಾವಣೆ ಮಾಡಿದ ಪರಿಣಾಮ ಯಾವುದೇ ದುರಸ್ತಿ ಕಾರ್ಯವಾಗುತ್ತಿಲ್ಲ. ಮಳೆಗೂ ಮುನ್ನ ಗಿಡ ಮರಗಳ ರೆಂಬೆ–ಕೊಂಬೆ ತುಂಡರಿಸುವ ಕೆಲಸ ಆಗಿಲ್ಲ. ಅಪಾಯಕಾರಿ ಮರಗಳ ತೆರವು ಮಾಡಿಲ್ಲ. ಇದರಿಂದಾಗಿ ವಿದ್ಯುತ್ ಕಡಿತವಾಗುತ್ತಿದೆ ಎಂದು ದೂರಿದರು.

ತಕ್ಷಣ ಪವರ್ಮನ್ಗಳ ನೇಮಕ, ಪರಿವರ್ತಕರಗಳ ದುರಸ್ತಿ, ವಿದ್ಯುತ್ ಲೈನ್ ಹಾದು ಹೋಗುವ ಭಾಗದ ಮರಗಳ ಕೊಂಬೆ ಕತ್ತರಿಸುವ ಕೆಲಸ ಆಗಬೇಕು. ದಿನದ 24 ಗಂಟೆ ಮೆಸ್ಕಾಂ ಸಹಾಯವಾಣಿ ಕೇಂದ್ರ ತೆರೆಯಬೇಕು. ಒಂದು ವಾರದಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸದಿದ್ದರೆ ಮೆಸ್ಕಾಂ ಕಚೇರಿ ಎದುರು ಬಿಜೆಪಿಯಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪುತ್ತೂರು ನಗರಸಭೆಯ ಮಾಜಿ ಅಧ್ಯಕ್ಷರಾದ ಜೀವಂಧರ್ ಜೈನ್, ಲೀಲಾವತಿ ಅಣ್ಣು ನಾಯ್ಕ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಗೌರಿ ಬನ್ನೂರು, ಸುಂದರ ಪೂಜಾರಿ ಬಡಾವು, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಯೋಗೀಶ್ ಬಾಳಿಗ, ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಲೋಕೇಶ್ ಹೆಗ್ಡೆ, ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ನಿತೀಶ್ ಕುಮಾರ್ ಶಾಂತಿವನ, ರಾಜೇಶ್ ಬನ್ನೂರು, ವಿಶ್ವನಾಥ ಗೌಡ ಬನ್ನೂರು, ಸತೀಶ್ ನಾಕ್, ವಿದ್ಯಾಧರ್ ಜೈನ್, ಮೋಹಿನಿ ವಿಶ್ವನಾಥಗೌಡ, ಮಹೇಶ್ ಕೆರಿ, ನಿತಿನ್ ಕಲ್ಲೇಗ, ನಿರಂಜನ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-29-824878623

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.