ಪುತ್ತೂರು: ತಾಲ್ಲೂಕಿನಲ್ಲಿ ಈ ವರ್ಷದ ಮೊದಲ ಮಳೆಗೆ 150ರಿಂದ 200 ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಮರ ಬಿದ್ದು ವಿದ್ಯುತ್ ತಂತಿಗಳು ತುಂಡಾದ ಕಾರಣ ಮೂರು ದಿನಗಳಿಂದ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆಯಾಗಿದೆ. ಸ್ಪಂದಿಸಿರುವ ಮೆಸ್ಕಾಂ ಸಿಬ್ಬಂದಿ ಸಮಸ್ಯೆ ಪರಿಹರಿಸಿದ್ದಾರೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಶಾಸಕರ ಕಚೇರಿಯಲ್ಲಿ ಸೋಮವಾರ ವಿದ್ಯುತ್ ಸಮಸ್ಯೆ ಬಗ್ಗೆ ಚರ್ಚಿಸಲು ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದರು.

ಸಮಸ್ಯೆ ಎದುರಾದ ಸಂದರ್ಭದಲ್ಲಿ ಸಮಾರೋಪಾದಿಯಲ್ಲಿ ಕ್ರಮಕೈಗೊಳ್ಳುವಂತೆ ಸೂಚಿಸಿದರು. ವಿದ್ಯುತ್ ಸಮಸ್ಯೆಯ ಸ್ಪಂದನೆಗಾಗಿ ಎರಡು ಸೆಕ್ಷನ್ ಮಾಡಲಾಗಿದ್ದು, ಒಂದು ಸೆಕ್ಷನ್ನಲ್ಲಿ 60 ಮಂದಿಯಂತೆ ಒಟ್ಟು 120 ಸಿಬ್ಬಂದಿ ಸಮರೋಪಾದಿಯಲ್ಲಿ ಕಾರ್ಯಪೃವೃತ್ತರಾಗಿದ್ದಾರೆ ಎಂದರು.

ಪುತ್ತೂರು ನಗರಸಭೆ ವ್ಯಾಪ್ತಿಯ ಬನ್ನೂರು, ಬೇರಿಕೆ, ಜಿಡೆಕಲ್ಲು, ಬಪ್ಪಳಿಗೆ, ಬಲ್ನಾಡು ಮತ್ತು ಜೈನರಗುರಿಯಲ್ಲಿ ಹೆಚ್ಚು ಹಾನಿಯಾಗಿದೆ. ಹೆಚ್ಚಿನ ಕಡೆ ಮರ ಬಿದ್ದು ವಿದ್ಯುತ್ ತಂತಿಗಳು ತುಂಡಾಗಿವೆ. ಅವುಗಳನ್ನು ಮರು ಜೋಡಿಸಲಾಗಿದೆ. ಎರಡು ಕಡೆ ಹೊರತುಪಡಿಸಿ ಉಳಿದ ಕಡೆಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಶೀಘ್ರದಲ್ಲೇ ದುರಸ್ತಿ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಮೆಸ್ಕಾಂನಲ್ಲಿ ಸಿಬ್ಬಂದಿ ಕೊರತೆ ಯಿಲ್ಲ. ಸಮಸ್ಯೆ ಇರುವಲ್ಲಿಗೆ ತೆರಳಿ ಪರಿಶೀಲನೆ ಮಾಡಿ ಕ್ರಮಕೈಗೊಳ್ಳಬೇಕು. ವಿದ್ಯುತ್ ಇಲ್ಲದೆ ಕೆಲವು ಕಡೆ ರೋಗಿಗಳಿಗೂ ತೊಂದರೆಯುಂಟಾಗಿದ್ದು, ಈ ರೀತಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ, ಕುಂಬ್ರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಶಂಕರ್, ಜೆಇಗಳಾದ ರಾಜೇಶ್, ದುರ್ಗಾಸಿಂಗ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-29-1428206483

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.