ಪುತ್ತೂರು: ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ, ಅಕ್ರಮವಾಗಿ ಲಾರಿಯೊಂದರಲ್ಲಿ ಕೆಂಪುಕಲ್ಲು ಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಮಾಡಿರುವ ಸಂಪ್ಯ ಠಾಣೆ ಪೊಲೀಸರು, ಲಾರಿಯನ್ನು ವಶಕ್ಕೆ ಪಡೆದು ಚಾಲಕ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಂಟ್ಯಾರು ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಲಾರಿಯನ್ನು ಪೊಲೀಸರು ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸಂಪ್ಯ ಠಾಣೆಯ ಎದುರು ತಡೆದು ನಿಲ್ಲಿಸಿ ವಿಚಾರಿಸಿದಾಗ ಕೇರಳದ ಕಾಸರಗೋಡಿನ ಪೆರ್ಲ ಎಂಬಲ್ಲಿಂದ ಬೆಳ್ತಂಗಡಿ ತಾಲ್ಲೂಕಿನ ಉಜಿರೆಗೆ ಕೆಂಪುಕಲ್ಲು ಸಾಗಣೇ ಮಾಡುತ್ತಿರುವುದಾಗಿ ಲಾರಿ ಚಾಲಕ ತಿಳಿಸಿದ್ದು, ಪೊಲೀಸರು ಪರವಾನಗಿ ಪರಿಶೀಲಿಸಿದ್ದಾರೆ.

ಕೆಂಪು ಕಲ್ಲು ಸಾಗಣೆ ದಾಖಲೆಯಲ್ಲಿ ದಿನಾಂಕ ಮತ್ತು ಸಮಯವನ್ನು ಅಳಿಸಿ ಹಾಕಿ, ಸಾಗಣೆ ದಾಖಲೆಪತ್ರದ ನಕಲಿ ಪ್ರತಿ ಸೃಷ್ಟಿಸಿ ಕೆಂಪುಕಲ್ಲುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿರುವ ವಿಚಾರ ತಿಳಿದು ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆರೋಪಿ ಲಾರಿ ಚಾಲಕ ಸತೀಶ್, ಲಾರಿ ಮಾಲೀಕ ಇಸಾಕ್ ಟಿ ಮತ್ತು ಕೆಂಪು ಕಲ್ಲಿನ ಕ್ವಾರಿಯ ಮಾಲೀಕ ಜೋಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-29-1626515609

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.