ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪುತ್ತೂರು | ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌: ಕೈದಿ ಮತ್ತೆ ಜೈಲಿಗೆ

Published 7 ಆಗಸ್ಟ್ 2024, 7:27 IST
Last Updated 7 ಆಗಸ್ಟ್ 2024, 7:27 IST
ಅಕ್ಷರ ಗಾತ್ರ

ಪುತ್ತೂರು: ಪ್ರಕರಣವೊಂದಕ್ಕೆ ಸಂಬಂಧಿಸಿ ಶಿಕ್ಷೆಗೊಳಗಾಗಿದ್ದ ಕೈದಿಯು, ಪ್ರಕರಣದ ಬಗ್ಗೆ  ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದ, ಅಲ್ಲೂ ಆತನಿಗೆ ಶಿಕ್ಷೆ ಕಾಯಂಗೊಂಡಿದೆ. ಆತನನ್ನು  ಪುತ್ತೂರು ನಗರ ಪೊಲೀಸರು ಒಳಮೊಗ್ರು ಗ್ರಾಮದ ಪರ್ಪುಂಜದಲ್ಲಿ ಬಂಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆತನನ್ನು ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸಿದೆ.

ಒಳಮೊಗ್ರು ಗ್ರಾಮದ ಪರ್ಪುಂಜ ದಿನೇಶ್ ಎಂಬಾತನಿಗೆ  ಪ್ರಕರಣವೊಂದರಲ್ಲಿ ಪುತ್ತೂರು ನ್ಯಾಯಾಲಯವು ಶಿಕ್ಷೆ ವಿಧಿಸಿತ್ತು.  ಆತ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದ. ಪುತ್ತೂರು ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಹೈಕೋರ್ಟ್‌ ಕಾಯಂಗೊಳಿಸಿತ್ತು. 

ಆರೋಪಿಯನ್ನು ಬಂಧಿಸುವಂತೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ವಾರಂಟ್  ಹೊರಡಿಸಿತ್ತು. ನ್ಯಾಯಾಲಯದ ಆದೇಶದಂತೆ ಪುತ್ತೂರು ನಗರ  ಠಾಣೆಯ ಇನ್‌ಸ್ಪೆಕ್ಟರ್ ಸತೀಶ್ ಜಿ.ಜೆ   ಮಾರ್ಗದರ್ಶನದಲ್ಲಿ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ಗಳಾದ ವಸಂತ ಗೌಡ ಮತ್ತು ಕೆ.ಬಸವರಾಜ್ ಆರೋಪಿಯನ್ನು  ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT