ಪುತ್ತೂರು: ‘ಇಲ್ಲಿನ ಬೆದ್ರಾಳದಲ್ಲಿ ಮಲ ತ್ಯಾಜ್ಯ ಘಟಕ ಆಗಿಯೇ ಆಗುತ್ತದೆ. ಯಾರು ಏನು ಬೇಕಾದರೂ ಮಾಡಲಿ, ಸರ್ಕಾರದ ವಿರುದ್ದ ಹೋಗಲು ಯಾರಿಗೂ ಸಾಧ್ಯವಿಲ್ಲ’ ಎಂದು ದ.ಕ. ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹೇಳಿದರು.

ಬುಧವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಮಲ ತ್ಯಾಜ್ಯ ಘಟಕಕ್ಕೆ ರಸ್ತೆ ನಿರ್ಮಾಣಕ್ಕಾಗಿ ಭೂ ಸ್ವಾಧೀನಕ್ಕೆ ನಗರ ಸಭೆಗೆ ಆದೇಶವಾಗಿದ್ದು ಇದರ ಪ್ರಕ್ರಿಯ ಆರಂಭವಾಗಿದೆ. ಕಾನೂನು ಬಾಹಿರ ಬಡಾವಣೆ ನಿರ್ಮಾಣಕ್ಕೆ ಮಾತ್ರ ನನ್ನ ವಿರೋಧ. ಸಾರ್ವಜನಿಕರಿಗೆ ಅನಗತ್ಯ ತೊಂದರೆ ನೀಡುವವರಿಗೆ, ರಸ್ತೆ ಮುಚ್ಚಿದವರಿಗೆ, ಗ್ರಾಹಕರಿಗೆ ಮೋಸ ಮಾಡುವವರಿಗೆ ಮುಂದಿನ ದಿನಗಳಲ್ಲಿ ಮಾರಿ ಹಬ್ಬವಿದೆ ಎಂದು ಎಚ್ಚರಿಸಿದರು.

ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ಮೌರೀಸ್ ಮಸ್ಕರೇನಸ್, ನಗರ ಕಾಂಗ್ರೆಸ್ ಉಪಾಧ್ಯಕ್ಷ ಸುರೇಶ್ ಪೂಜಾರಿ, ಮಾಜಿ ಕಾರ್ಯದರ್ಶಿಗಳಾದ ರೋಷನ್ ಡಯಾಸ್, ಕಮರುದ್ದೀನ್ ಕೂರ್ನಡ್ಕ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-29-973947264

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.