ಪುತ್ತೂರು: ಯಶಸ್ಸು ಪಡೆಯಬೇಕಾರೆ ವಿದ್ಯೆಯೊಂದಿಗೆ ವಿನಯವೂ ಅಗತ್ಯ. ಜೀವನದಲ್ಲಿ ಉನ್ನತ ಹುದ್ದೆ ಅಲಂಕರಿಸಿದ್ದರೂ ಮಾನವೀಯ ಮೌಲ್ಯಗಳನ್ನು ಮರೆಯಬಾರದು ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಪೀಟರ್ ಪಾವ್ಲ್ ಸಲ್ದಾನ ಹೇಳಿದರು.

ಮಂಗಳೂರಿನ ಕಥೋಲಿಕ್ ಶಿಕ್ಷಣ ಮಂಡಳಿಯ ಅಧೀನದ ಪುತ್ತೂರಿನ ಸೇಂಟ್ ಫಿಲೋಮಿನಾ ಕಾಲೇಜು ಮಂಗಳೂರು ವಿಶ್ವವಿದ್ಯಾನಿಯದ ಅಧೀನದ ಸ್ವಾಯತ್ತ ಕಾಲೇಜು ಎಂದು ಘೋಷಿಸಲಾದ ಸಂಬಂಧ ಶನಿವಾರ ಕಾಲೇಜಿನಲ್ಲಿ ನಡೆದ ಸ್ವಾಯತ್ತ ಸ್ಥಾನಮಾನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರು ಮಹಾನಗರ ಮೆಟ್ರೊಪಾಲಿಟನ್ ಧರ್ಮಪ್ರಾಂತ್ಯದ ಆರ್ಚ್ ಬಿಷಪ್ ಪೀಟರ್ ಮಚಾದೊ ಮಾತನಾಡಿ, ವಿಮರ್ಶಾತ್ಮಕ ಚಿಂತನೆ, ಜೀವನ ಪರ್ಯಂತ ಕಲಿಕೆಯ ಬಗ್ಗೆ ಒಲವು, ಸಮರ್ಪಕ ಸಂವಹನ, ಶೈಕ್ಷಣಿಕ ಆವಿಷ್ಕಾರ ಜತೆಯಾಗಿ ಸಾಗಿದರೆ ಶಿಕ್ಷಣ ವ್ಯವಸ್ಥೆಯಲ್ಲಿ ಇತಿಹಾಸ ಸೃಷ್ಟಿಸಬಹುದು ಎಂದರು.

ಸ್ವಾಯತ್ತ ಕಾಲೇಜಿನ ಲಾಂಛನ ಹಾಗೂ ಪರಿಷ್ಕರಿಸಲಾದ ಕಾಲೇಜು ವೆಬ್ಸೈಟ್ ಬಿಡುಗಡೆ ಮಾಡಿದ ಮುಖಂಡ ನಳಿನ್ ಕುಮಾರ್ ಕಟೀಲ್, ಕ್ರೈಸ್ತ ಸಂಸ್ಥೆಗಳು ವೈದ್ಯಕೀಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಅದ್ಭುತ ಕೊಡುಗೆಗಳನ್ನು ನೀಡಿವೆ. ಹಲವಾರು ಪ್ರಜ್ಞಾವಂತ ಪ್ರತಿಭೆಗಳನ್ನು ನೀಡಿರುವ ಕೀರ್ತಿ ಫಿಲೋಮಿನಾ ಕಾಲೇಜಿಗೆ ಸಲ್ಲುತ್ತದೆ ಎಂದರು.

ಸ್ವಾಯತ್ತ ಕಾಲೇಜಿನಲ್ಲಿ ನಿರ್ಮಿಸಲಾದ ವಿವಿಧ ವ್ಯವಸ್ಥೆಗಳನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ, ವಿದ್ಯಾರ್ಥಿಗಳನ್ನು ಈ ದೇಶದ ವ್ಯವಸ್ಥೆಗೆ ಸರಿಯಾಗಿ ಹೊಂದಿಕೊಳ್ಳುವ ರೀತಿಯಲ್ಲಿ ಸಿದ್ಧಗೊಳಿಸುವ ದೊಡ್ಡ ಜವಾಬ್ದಾರಿ ಸ್ವಾಯತ್ತ ಸಂಸ್ಥೆಗಿದೆ ಎಂದರು.

ಕಥೋಲಿಕ್ ಶಿಕ್ಷಣ ಮಂಡಳಿಯ ನಿಕಟಪೂರ್ವ ಕಾರ್ಯದರ್ಶಿ ಫಾ.ಆಂಟನಿ ಮೈಕೆಲ್ ಶೆರಾ ಮಾತನಾಡಿದರು. ‘ಫಿಲೋ ಜೆನೆಸಿಸ್’ ಸ್ಮರಣ ಸಂಚಿಕೆಯನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಬಿಡುಗಡೆ ಮಾಡಿದರು.

ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಅಶೋಕ್ಕುಮಾರ್ ರೈ, ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕಿ ಕವಿತಾ ಕೆ.ಆರ್., ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗಿಸ್, ಕಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಫಾ.ಪ್ರವೀಣ್ ಲಿಯೋ ಲಸ್ರಾದೊ ಮಾತನಾಡಿದರು.

ಮಂಗಳೂರು ಧರ್ಮಪ್ರಾಂತ್ಯದ ಧರ್ಮಗುರು ಲಾರೆನ್ಸ್ ಮ್ಯಾಕ್ಸಿಮ್ ನೊರೊನ್ಹಾ, ಮಾಯ್ದೆ ದೇವುಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ಟ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಪ್ರತಿಮಾ ಹೆಗ್ಡೆ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಎ.ಎಂ.ಅಬ್ದುಲ್ ಕುಂಞಿ ಭಾಗವಹಿಸಿದ್ದರು.

ಕಾಲೇಜಿನ ಸಂಚಾಲಕ ಫಾ.ಲಾರೆನ್ಸ್ ಮಸ್ಕರೇನಸ್ ಸ್ವಾಗತಿಸಿದರು. ಪ್ರಾಂಶುಪಾಲ ಫಾ.ಆ್ಯಂಟನಿ ಪ್ರಕಾಶ್ ಮೊಂತೇರೊ ವಂದಿಸಿದರು. ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಭಾರತಿ ಎಸ್.ರೈ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮೈತ್ರಿ ಭಟ್ ನಿರೂಪಿಸಿದರು.

ಸ್ವಾಯತ್ತ ಕಾಲೇಜಿಗೆ ನೇಮಕಗೊಂಡ ರಿಜಿಸ್ಟ್ರಾರ್ ನಾರ್ಬರ್ಟ್ ಮಸ್ಕರೇನಸ್, ಪರೀಕ್ಷಾಂಗ ಕುಲಸಚಿವ ವಿನಯಚಂದ್ರ, ಹಣಕಾಸು ಅಧಿಕಾರಿ ಎಡ್ವಿನ್ ಎಸ್.ಡಿಸೋಜ, ಶೈಕ್ಷಣಿಕ ಉಪ ಕುಲಸಚಿವ ವಿಪಿನ್ ನಾಯಕ್ ಎನ್.ಎಸ್., ಪರೀಕ್ಷಾಂಗ ಉಪ ಕುಲಸಚಿವರಾದ ಜಾನ್ಸನ್ ಡೇವಿಡ್ ಸಿಕ್ವೇರಾ, ಅಭಿಷೇಕ್ ಸುವರ್ಣ ಅವರನ್ನು ಕಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಫಾ.ಪ್ರವೀಣ್ ಲಿಯೋ ಲಸ್ರಾದೊ ಗೌರವಿಸಿದರು.

ಭಾನುಪ್ರಕಾಶ್, ಅಪೇಕ್ಷಾ, ಕಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಫಾ.ಜೆರಾಲ್ಡ್ ಡಿಸೋಜ, ಪ್ರಾಂಶುಪಾಲರಾಗಿದ್ದ ಫಾ.ಫ್ರಾನ್ಸಿಸ್ ಕ್ಸೇವಿಯರ್ ಗೋಮ್ಸ್, ಪ್ರೊ.ಲೊಯೋ ನೊರೋನ್ಹಾ ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.