ಪುತ್ತೂರು: ತೆಂಗಿನ ಕಾಯಿ ಕೀಳಲೆಂದು ಹಿಡಿದುಕೊಂಡಿದ್ದ ಕಬ್ಬಿಣ ವಾಹಕವಾಗಿರುವ ದೋಟಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಪುತ್ತೂರಿನ ಪ್ರೌಢ ಶಾಲೆಯ ವಿದ್ಯಾರ್ಥಿ ಮೃತಪಟ್ಟ ಘಟನೆ ಪುತ್ತೂರು ನಗರ ಠಾಣೆ ವ್ಯಾಪ್ತಿಯಲ್ಲಿ ಬರುವ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಶನಿವಾರ ನಡೆದಿದೆ.

ಪುತ್ತೂರಿನ ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ, ಮೂಲತಃ ಪುತ್ತೂರು ತಾಲ್ಲೂಕಿನ ಬಜತ್ತೂರು ಗ್ರಾಮದ ನೀರಕಟ್ಟೆಯವರಾಗಿದ್ದು, ಪ್ರಸ್ತುತ ಬಂಟ್ವಾಳ ತಾ ಲ್ಲೂಕಿನ ನೇರಳಕಟ್ಟೆ ಸಮೀಪದ ಗಣೇಶನಗರ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿರುವ ಟಿ.ಶರೀಫ್ ಅವರ ಪುತ್ರ ಮೊಹಮ್ಮದ್ ಶಹೀರ್ (15) ಮೃತಪಟ್ಟ ಬಾಲಕ.

ಶಾಲೆಗೆ ರಜೆ ಕಾರಣ ಗಡಿಯಾರದಲ್ಲಿರುವ ತನ್ನ ಅಜ್ಜ ಪುತ್ತು ಅವರ ಮನೆಗೆ ಹೋಗಿದ್ದ ಮೊಹಮ್ಮದ್ ಶಹೀರ್ ಶನಿವಾರ ಬೆಳಿಗ್ಗೆ ಪಕ್ಕದ ಮನೆಯವರ ಜಮೀನಿನಲ್ಲಿದ್ದ ತೆಂಗಿನ ಮರದಿಂದ ತೆಂಗಿನಕಾಯಿ ಕೀಳಲೆಂದು ದೋಟಿ ಎತ್ತಿದ್ದ ವೇಳೆ ಅವಘಡ ನಡೆದಿದೆ.

ಈ ಸಂಬಂಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಹೀರ್ಗೆ ತಂದೆ, ತಾಯಿ, ಸಹೋದರ, ಇಬ್ಬರು ಸಹೋದರಿಯರು ಇದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-29-1571031705

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.