ಪುತ್ತೂರು: ಸುಬ್ರಹ್ಮಣ್ಯ– ಮಂಜೇಶ್ವರ ಹೆದ್ದಾರಿಯಲ್ಲಿ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ

ಮೃತರನ್ನು ಬಂಟ್ವಾಳ ತಾಲ್ಲೂಕಿನ ಮಿತ್ತೂರು ಗ್ರಾಮದ ಬೊಳ್ಳರಮಜಲು ಪುರಂದರ ಅವರ ಮಗ ಯಜ್ಞೇಶ್ (21) ಹಾಗೂ ಪುತ್ತೂರು ತಾಲ್ಲೂಕಿನ ಪಾಣಾಜೆ ಗ್ರಾಮದ ಆರ್ಲಪದವು ಸಮೀಪದ ಭರಣ್ಯದ ನೋಣಯ್ಯ ಅವರ ಮಗ ಜಗನ್ (20) ಎಂದು ಗುರುತಿಸಲಾಗಿದೆ.

ಜಗನ್ ಪುತ್ತೂರಿನ ಅಕ್ಷಯ ಕಾಲೇಜಿನ ಅಂತಿಮ ಪದವಿ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿ. ಇಂಟರ್ನ್ಷಿಪ್ ಸಲುವಾಗಿ ಆಸ್ಟ್ರೇಲಿಯಾಕ್ಕೆ ತೆರಳಿದ್ದ ಅವರು ಇತ್ತೀಚಿಗೆ ಊರಿಗೆ ಮರಳಿದ್ದರು. ಯುವಕರಿಬ್ಬರು ಯುವಕರು ಕಡಬ ತಾಲ್ಲೂಕಿನ ಆಲಂಕಾರಿಗೆ ಕೆಲಸದ ನಿಮಿತ್ತ ತೆರಳಿದ್ದರು. ಮಂಗಳವಾರ ಸಂಜೆ ಬೈಕಿನಲ್ಲಿ ಮನೆಗೆ ಹಿಂತಿರುಗುತಿದ್ದ ವೇಳೆ ಅಪಘಾತ ಸಂಭವಿಸಿದೆ. ಚಾಪಳ್ಳ ತಿರುವಿನಲ್ಲಿ ಎದುರಿನಿಂದ ಬಂದ ಮುಗೆರೋಡಿ ಕನ್ಸ್ಟ್ರಕ್ಷನ್ಗೆ ಸೇರಿದ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.

ಅಲಂಕಾರಿನಲ್ಲಿ ನಡೆಯುತ್ತಿದ್ದ ಕಾಮಗಾರಿಗೆ ಸವಣೂರು ಕಡೆಯಿಂದ ನೀರು ಪೂರೈಸುತ್ತಿದ್ದ ಟ್ಯಾಂಕರ್ ಚಾಲಕ, ಸ್ಕೂಟರ್ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ವಾಹನವನ್ನು ಎಡಕ್ಕೆ ತಿರುಗಿಸಿದ್ದರು. ಈ ವೇಳೆ ಟ್ಯಾಂಕರ್ನ ಚಕ್ರದಡಿಗೆ ಬೈಕ್ ಸಿಲುಕಿತ್ತು. ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ ಅದೇ ರಸ್ತೆಯಲ್ಲಿ ಬರುತಿದ್ದ ಮತ್ತೊಂದು ಬೈಕ್ ಸವಾರರು ಅಪಘಾತವನ್ನು ಕಂಡು ಗಾಬರಿಯಿಂದ ಬ್ರೇಕ್ ಹಾಕಿದಾಗ ಬೈಕ್ ಸ್ಕಿಡ್ ಆಗಿದೆ. ಈ ಘಟನೆಯಲ್ಲಿ ಬೈಕ್ನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತದಿಂದಾಗಿ ಸ್ಥಳದಲ್ಲಿ ವಾಹನ ಸಂಚಾರವನ್ನು ವ್ಯತ್ಯಯ ಉಂಟಾಗಿದ್ದು. ಘಟನಾ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.