ಪುತ್ತೂರು: ಕಾರೊಂದು ಇನ್ನೊಂದು ಕಾರಿಗೆ ಹಿಂದಿನಿಂದ ಡಿಕ್ಕಿಯಾಗಿ ಆ ಕಾರು ವಿರುದ್ಧ ದಿಕ್ಕಿನಿಂದ ಬಂದ ಬೈಕ್ಗೆ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡ ಹಾಗೂ ಅಘಘಾತಕ್ಕೆ ಕಾರಣವಾದ ಕಾರು ಚಾಲಕ ವಾಹನ ನಿಲ್ಲಿಸದೆ ಪರಾರಿಯಾದ ಘಟನೆ ಪುತ್ತೂರು– ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ ಸಮೀಪ ನಡೆದಿದೆ.

ಅನಂತ ಎಸ್.ಕೆ. ಎಂಬುವರು ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರನ್ನು ಕೆಮ್ಮಾಯಿ ಬಳಿ ರಸ್ತೆಯ ಬಲ ಬದಿಗೆ ತಿರುಗಿಸುತ್ತಿದ್ದ ವೇಳೆ ಹಿಂದಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ಕಳಕೊಂಡು ಮುಂದಕ್ಕೆ ಚಲಿಸಿದ ಕಾರು ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಬೈಕ್ಗೆ ಹಿಂದಿನಿಂದ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ನಾರಾಯಣ ಭಟ್ ಮತ್ತು ಸಹ ಸವಾರ ಸತ್ಯನಾರಾಯಣ ಪ್ರಕಾಶ್ ಭಟ್ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿ ಕಾರು ಚಾಲಕ, ಶಿವಮೊಗ್ಗ ಜಿಲ್ಲೆಯ ಹೊಸನಗರದ ಅನಂತ ಎಸ್.ಕೆ. ಎಂಬುವರು ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಘಘಾತ ಎಸಗಿದ ಕಾರು ಚಾಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ನೆರವಾಗದೆ, ಹತ್ತಿರದ ಪೊಲೀಸ್ ಠಾಣೆಗೂ ಮಾಹಿತಿ ನೀಡದೆ ವಾಹನದೊಂದಿಗೆ ಪರಾರಿಯಾಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-29-1076519015

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.