ಪುತ್ತೂರು: ‘ದೇಶದ ಅಭಿವೃದ್ಧಿಗಾಗಿ ಕೆಲವೊಮ್ಮೆ ಕಠಿಣ ನಿರ್ಧಾರ ಕೈಗೊಳ್ಳುವುದು ಅಗತ್ಯವಾಗುತ್ತದೆ. ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದಂತೆ ಬೊಳುವಾರಿನಲ್ಲಿ ನಗರ ಸಭೆಯ ಕಟ್ಟಡ ತೆರವಿಗೆ ಆಕ್ಷೇಪಣೆಯಿತ್ತು. ಅದನ್ನು ತಳ್ಳಿ ಹಾಕಿ ತೆರವುಗೊಳಿಸಲಾಗಿದೆ. ಕಟ್ಟಡ ತೆರವಿಗೆ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ’ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಪುತ್ತೂರು- ಉಪ್ಪಿನಂಗಡಿ ಚತುಷ್ಪಥ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಬೊಳುವಾರಿನಲ್ಲಿ ರಸ್ತೆ ಅಭಿವೃದ್ಧಿಗಾಗಿ ಕಟ್ಟಡ ತೆರವುಗೊಳಿಸುವ ಕಾರ್ಯ ವೀಕ್ಷಿಸಿ ಅವರು ಮಾತನಾಡಿದರು.

ಎರಡು ಮೂರು ಮನೆಯವರ ಆಕ್ಷೇಪಣೆಯಿದ್ದು, ಅವರ ಮನವೊಳಿಸಲಾಗುವುದು. ಆ ಮನೆಯವರಿಗೆ ಉಪ ನೋಂದಣಾಧಿಕಾರಿ ನಿಗದಿ ಪಡಿಸಿದ ಬೆಲೆಗಿಂತ ಮೂರು ಪಟ್ಟು ಹೆಚ್ಚು ಪರಿಹಾರ ನೀಡಲಾಗುವುದು. ಹಾಗಿದ್ದರೂ ಬಿಡದಿದ್ದರೆ ಕಾನೂನಾತ್ಮಕವಾಗಿಯಾದರೂ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು ಎಂದರು.

ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಂದ ಕಾಮಗಾರಿ ಬಗ್ಗೆ ಮಾಹಿತಿ ಪಡೆದುಕೊಂಡರು. ಚತುಷ್ಪಥ ಕಾಮಗಾರಿಗೆ ಬೊಳುವಾರಿನಲ್ಲಿ ನಗರ ಸಭೆಯ ಕಟ್ಟಡ ತೆರವುಗೊಳಿಸಲಾಗಿದೆ. ಅಲ್ಲದೆ, ಇಲ್ಲಿರುವ ಶೌಚಾಲಯ, ಗೂಡಂಗಡಿ ತೆರವುಗೊಳಿಸಲಾಗುವುದು. ಮುಂದಿನ 25-30ವರ್ಷದ ಮನ್ನೋಟ ಇಟ್ಟು ರಸ್ತೆ ಕಾರ್ಯ ನಡೆಸಲಾಗುವುದು. ಈ ಹಿಂದೆ 10 ಮೀಟರ್ ರಸ್ತೆಯ ಯೋಜನೆಯಿತ್ತು. ಅದನ್ನು ಕೈಬಿಟ್ಟು ಚತುಷ್ಪಥ ರಸ್ತೆ ನಿರ್ಮಾಣಗೊಳ್ಳಲಿದೆ. ಮಂಗಳೂರಿನಿಂದ ಬರುವ ವಾಹನಗಳ ದಟ್ಟಣೆ ಆಗದಂತೆ ದೊಡ್ಡ ವೃತ್ತ ನಿರ್ಮಿಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಎಲ್ಲ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ನೆಕ್ಕಿಲಾಡಿಯಿಂದ ಉಪ್ಪಿನಂಗಡಿ ತನಕದ ರಸ್ತೆಗೆ ₹13 ಕೋಟಿ ಅನುದಾನ ಮಂಜೂರಾಗಿ ಟೆಂಡರ್ ಹಂತದಲ್ಲಿದೆ. ₹2.50ಕೋಟಿ ಹೆಚ್ಚುವರಿ ಅನುದಾನ ಮೀಸಲಿಡಲಾಗಿದೆ. ಒಟ್ಟು ₹49 ಕೋಟಿ ಅನುದಾನದಲ್ಲಿ ಈ ರಸ್ತೆ ಅಭಿವೃದ್ಧಿ ನಡೆಯಲಿದೆ ಎಂದು ಅವರು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-29-295436233

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.