ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತೂರು: ವಿವೇಕಾನಂದ ಕಾಲೇಜಿನಲ್ಲಿ ಸಿಇಟಿ ಸಲಹಾ ಕೇಂದ್ರ ಆರಂಭ

Last Updated 24 ಜೂನ್ 2021, 5:07 IST
ಅಕ್ಷರ ಗಾತ್ರ

ಪುತ್ತೂರು: ದ್ವಿತೀಯ ಪಿಯುಸಿ ಮುಗಿಸಿ ವೃತ್ತಿಪರ ಕೋರ್ಸ್‌ಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಲಹಾ ಕೇಂದ್ರವನ್ನು ಪ್ರಾರಂಭಿಸಲಾಗಿದೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅನೇಕ ವರ್ಷಗಳಿಂದ ಸಹಾಯ ಕೇಂದ್ರವನ್ನು ನಡೆಸಿಕೊಂಡು ಬರಲಾಗುತ್ತಿದೆ. ಪ್ರತಿವರ್ಷವೂ ಪ್ರಕ್ರಿಯೆಯಲ್ಲಿ ಬದಲಾವಣೆಗಳು ನಡೆಯುತ್ತಲೇ ಇರುತ್ತವೆ. ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಮಾನಗಳು, ಗೊಂದಲಗಳು ಇರುವುದು ಸಹಜ. ಇದರ ನಿವಾರಣೆಗೆ ಸಲಹಾ ಕೇಂದ್ರವನ್ನು ತೆರೆಯಲಾಗಿದ್ದು, ವಿದ್ಯಾರ್ಥಿಗಳು, ಪೋಷಕರು ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ ಪ್ರಸನ್ನ ಕೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಸೇರುವುದಕ್ಕೆ ಬೇಕಾದ ಮಾರ್ಗದರ್ಶನ, ಸಿಇಟಿಗೆ ಆನ್‌ಲೈನ್ ಅ‌ರ್ಜಿ ಸಲ್ಲಿಕೆ, ಹೊಂದಿಸಬೇಕಾದ ದಾಖಲೆಗಳು ಮುಂತಾದ ವಿಷಯಗಳ ಬಗ್ಗೆ ಉಚಿತ ಮಾಹಿತಿ ನೀಡಲಾಗುತ್ತದೆ. ಸಿಇಟಿ ಪ್ರಕ್ರಿಯೆ ಮುಗಿಯುವವರೆಗೂ ಸಹಾಯ ಕೇಂದ್ರವು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30ರವರೆಗೆ ಪ್ರತಿದಿನ ಕೆಲಸ ಮಾಡುತ್ತದೆ. ಕೋವಿಡ್ ಲಸಿಕೆ ಪಡೆದಿರುವ ಸಿಬ್ಬಂದಿಯನ್ನೇ ಸಲಹಾ ಕೇಂದ್ರಕ್ಕೆ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT