ಪುತ್ತೂರು: ‘ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಪುತ್ತೂರು ನೆಹರೂ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ವಿಸ್ತರಿತ ಕಟ್ಟಡದ ಉದ್ಘಾಟನಾ ಸಮಾರಂಭ ಮಾರ್ಚ್ 25ರಂದು ನಡೆಯಲಿದೆ’ ಎಂದು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷೆ ವಸಂತಿ ಕೆ. ತಿಳಿಸಿದರು.

ಪುತ್ತೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನವದೆಹಲಿಯ ಸಿಬಿಎಸ್ಇ ಮಂಡಳಿಯಲ್ಲಿ ಸಂಯೋಜನೆ ಹೊಂದಿರುವ ಸಂಸ್ಥೆಯು ಸಿಬಿಎಸ್ಇ ಪಠ್ಯಕ್ರಮ ಹೊಂದಿದೆ. ಶಾಲೆಯಲ್ಲಿ ಪ್ರಸ್ತುತ 600ಕ್ಕಿಂತ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮಕ್ಕಳ ಅಭಿವೃದ್ಧಿ ಮತ್ತು ಉತ್ತಮ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಲು 2ನೇ ಮಹಡಿ ನಿರ್ಮಿಸಲಾಗಿದೆ. ಮಾರ್ಚ್ 25ರಂದು ಬೆಳಿಗ್ಗೆ ನೂತನ ಕಟ್ಟಡದಲ್ಲಿ ಗಣಪತಿ ಹೋಮ ಸಹಿತ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ. ಮಧ್ಯಾಹ್ನ 3 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ’ ಎಂದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸುವರು. ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೆ.ಎಂ. ಶಾಂತಾರಾಮ ಶೆಟ್ಟಿ ಅತಿಥಿಯಾಗಿ ಭಾಗವಹಿಸುವರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ. ಕೃಷ್ಣ ಭಟ್, ಉಪಾಧ್ಯಕ್ಷ ಸತೀಶ್ ರಾವ್ ಭಾಗವಹಿಸುವರು ಎಂದು ಹೇಳಿದರು.

ಸಂಸ್ಥೆಯ ಸಂಚಾಲಕ ಭರತ್ ಪೈ, ಪ್ರಾಂಶುಪಾಲೆ ಸಿಂಧು ವಿ.ಜಿ., ಉಪ ಪ್ರಾಂಶುಪಾಲೆ ಶ್ರೀದೇವಿ ಹೆಗಡೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-29-1238545594

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.