ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌ನಲ್ಲಿ ಅಸಭ್ಯ ವರ್ತನೆ: ಪ್ರಯಾಣಿಕನ ವಿರುದ್ಧ ಮಹಿಳೆಯ ದೂರು

Published 23 ಜೂನ್ 2023, 14:10 IST
Last Updated 23 ಜೂನ್ 2023, 14:10 IST
ಅಕ್ಷರ ಗಾತ್ರ

ಪುತ್ತೂರು: ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಂಟ್ವಾಳ ತಾಲ್ಲೂಕಿನ ಕರೋಪಾಡಿ ಗ್ರಾಮದ ಕನ್ಯಾನ ಕುಕ್ಕಾಜೆ ನಿವಾಸಿ ಮಹಮ್ಮದ್ ಅಶ್ರಫ್ ಅವರ ಪತ್ನಿ ಶಹನಾಜ್ ದೂರು ನೀಡಿರುವ ಮಹಿಳೆ. ಉಪ್ಪಳದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮುರ ಎಂಬಲ್ಲಿ, ಬಸ್‌ನ ಸೀಟಿನ ಹಿಂಬದಿಯಲ್ಲಿ ಕುಳಿತಿದ್ದ  ವ್ಯಕ್ತಿಯೊಬ್ಬರು ಅಶ್ಲೀಲವಾಗಿ ವರ್ತಿಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ವ್ಯಕ್ತಿಯನ್ನು ಪ್ರಶ್ನಿಸುತ್ತಿದ್ದಂತೆ ಆತ ಬೊಳುವಾರಿನಲ್ಲಿ ಬಸ್‌ನಿಂದ ಇಳಿದು ಹೋಗಿದ್ದಾನೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಪತಿಯ ವಿರುದ್ಧ ದೂರು

ಪುತ್ತೂರು: ಐದು ವರ್ಷಗಳಿಂದ ಪತಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.  ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿಯ ನಿವಾಸಿಯಾದ ನಝ್ಮಿಯಾ ದೂರಿನಂತೆ, ಪತಿ ಪುತ್ತೂರಿನ ದರ್ಬೆ ಕಾವೇರಿಕಟ್ಟೆ ನಿವಾಸಿ ಮಹಮ್ಮದ್ ರಫೀಕ್ ಕೆ.ಟಿ(45) ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT